ಬೆಂಗಳೂರು:ಉದ್ಯಮಿ ಮುಸ್ತಫಾ ರಾಜ್ ಜೊತೆ ಹಸೆಮಣೆ ಏರಿದ್ದ ನಟಿ ಪ್ರಿಯಾಮಣಿ ದಾಂಪತ್ಯ ಜೀವನಕ್ಕೆ ಇದೀಗ ಆತಂಕ ಎದುರಾಗಿದೆ. ಉದ್ಯಮಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ.
”ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನಾತ್ಮಕವಾಗಿ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು’’. ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯ. ಪ್ರಿಯಾಮಣಿ ಅವರನ್ನು ಮದುವೆಯಾಗುವಾಗ, ತಾವು ಬಾಚ್ಯುಲರ್ ಎಂದು ಕೋರ್ಟ್‌ನಲ್ಲಿ ಮುಸ್ತಫಾ ರಾಜ್ ಘೋಷಿಸಿಕೊಂಡಿದ್ದರು” ಎಂದು ಆಯೆಷಾ ಹೇಳಿದ್ದಾರೆ.
ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.
ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ತಾನೆ ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬಾರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಅಂದಹಾಗೇ 2013ರಲ್ಲಿ ಮೊದಲ ಮದುವೆಯಾಗಿದ್ದ ಮುಸ್ತಫಾ ರಾಜ್ ಗೆ ಇಬ್ಬರು ಮಕ್ಕಳಿದ್ದರು. ಇತ್ತ ಆಯೀಷಾ ಅವರಿಂದ ದೂರವಾಗಿದ್ದಂತೆ ಅವರು, 2017ರಲ್ಲಿ ನಟಿ ಪ್ರಿಯಾಮಣಿ ವಿವಾಹವಾಗಿದ್ದರು.