ಚಿಂಚೋಳಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನನ್ನ ಟಾರ್ಗೆಟ್ ಅಲ್ಲ, ಮತಕ್ಷೇತ್ರವನ್ನು ಹೊಳೆನರಸೀಪುರ ದಂತೆ ಅಭಿವೃದಿಟಛಿ ಮಾಡಬೇಕು ಎನ್ನುವುದೇ ನನ್ನ ಉದ್ದೇಶವಾಗಿದೆ ಎಂದು ಶಾಸಕ ಡಾ| ಉಮೇಶ ಜಾಧವ್ ಸ್ಪಷ್ಪಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ನನ್ನ ಮತಕ್ಷೇತ್ರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲವೆಂದು ಹೇಳಿದ್ದಾರೆ.
ಅವರು ಮುಖಾಮುಖೀಯಾಗಿ ಚರ್ಚೆಗೆ ಬರಲಿ. ಅಲ್ಲಿ ಈ ಕುರಿತು ಮಾತನಾಡುತ್ತೇನೆ. ತಾಲೂಕಿಗೆ ಕಳೆದ ಆರು ತಿಂಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಒಮ್ಮೆಯೂ ಭೇಟಿ ನೀಡಿಲ್ಲ. ಆದರೆ, ಕೃಷಿ ಸಚಿವ ಶಿವಶಂಕರ ರೆಡ್ಡಿಯವರು ಹೈದ್ರಾಬಾದ್‌ಗೆ ಹೋಗುವ ಮಾರ್ಗದಲ್ಲಿ ತರಾತುರಿಯಲ್ಲಿ ತಾಲೂಕಿನ ದೋಟಿಕೊಳ ಗ್ರಾಮಕ್ಕೆ ಭೇಟಿ ನೀಡಿ, ಸುಜಲಾ ಕಾರ್ಯಕ್ರಮ ಪರಿಶೀಲಿಸಿದರು. ಇಂತಹ ಸಂದಿ ಗಟಛಿ ಪರಿಸ್ಥಿತಿಯಲ್ಲಿ ನಾನಿದ್ದೇನೆ ಎಂದರು. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ನನಗೆ ಸಚಿವ ಸ್ಥಾನ ದೊರಕಿದ್ದರೆ ಇವುಗಳನ್ನು ಕಾರ್ಯಗತ ಮಾಡಲು ಅನುಕೂಲವಾಗುತ್ತಿತ್ತು ಎಂದರು.
ಜಾಧವ್‌ಗೆ ಈಶ್ವರ ಖಂಡ್ರೆ ಬುಲಾವ್: ಉಮೇಶ ಜಾಧವ್ ಅವರಿಗೆ ಶುಕ್ರವಾರ ಮಧ್ಯಾಹ್ನ ದೂರವಾಣಿ ಕರೆ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು, ಬೀದರ್‌ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಲ್ಲಿ ಚಿಂಚೋಳಿ ಕ್ಷೇತ್ರದ ಸಮಸ್ಯೆಗಳು ಹಾಗೂ ಶಾಸಕರ ಅತೃಪ್ತಿಗೆ ಕಾರಣಗಳೇನು ಎನ್ನುವ ಕುರಿತು ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ಯಾವ ಪಕ್ಷಕ್ಕೆ ಸೇರಬೇಕೆಂಬುದನ್ನು ಇನ್ನೂ ನಿರ್ಧರಿಸಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಆದರೆ ನಾನು 50 ಕೋಟಿ ರೂ.ಗೆ ಮಾರಾಟವಾಗಿದ್ದೇನೆ ಎಂದು ಸುಳ್ಳು ಆಪಾದನೆ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವ ಯತ್ನ ಮಾಡಲಾಗುತ್ತಿದೆ.
● ಡಾ| ಉಮೇಶ ಜಾಧವ್, ಶಾಸಕ