Advertisement

Priyank Kharge;ಹೊಟ್ಟೆಯಲ್ಲಿ ಸೋಂಕು ಇದ್ದರೆ,ತಲೆ ಕತ್ತರಿಸುತ್ತೀರಾ?:ಬಿ.ಎಲ್.ಸಂತೋಷ್ ಕಿಡಿ

06:15 PM Sep 04, 2023 | Team Udayavani |

ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂಬ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರತಿಕ್ರಿಯೆಯ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಕ್ರೋಶ ಹೊರ ಹಾಕಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

“ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವನ ಘನತೆಯನ್ನು ಖಚಿತಪಡಿಸಿಕೊಳ್ಳದ ಯಾವುದೇ ಧರ್ಮ ನನ್ನ ಪ್ರಕಾರ ಧರ್ಮವಲ್ಲ. ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮವು ರೋಗದಷ್ಟೇ ಕೆಟ್ಟದ್ದು” ಎಂದು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದರು.

ತಿರುಗೇಟು ನೀಡಿರುವ ಬಿ.ಎಲ್. ಸಂತೋಷ್ ‘ಹಾಗಾದರೆ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ, ನೀವು ತಲೆಯನ್ನು ಕತ್ತರಿಸುತ್ತೀರಾ??’ ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಪೋಸ್ಟ್ ನಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರಿಗೆ ‘ಉದಯನಿಧಿ ಸ್ಟಾಲಿನ್ ಹೇಳಿದ್ದನ್ನು ನೀವು ಅನುಮೋದಿಸುತ್ತೀರಿ ಎಂದರ್ಥ? ಎಂದು ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರನ್ನು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next