Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಎಸ್ ಟಿ ತೆರಿಗೆ ವಸೂಲಿಯಲ್ಲಿ ಉಂಟಾಗುವ ನಷ್ಟವನ್ನು 2020ರವರೆಗೆ ಕಟ್ಟಿಕೊಡುವ ಬದ್ಧತೆಯನ್ಜು ಕೇಂದ್ರ 2017ರ ಜಿಎಸ್ ಟಿ ಕಾಯ್ದೆಯಲ್ಲಿ ವ್ಯಕ್ತಪಡಿಸಿದೆ. ಅದರಂತೆ ನಡೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.
Related Articles
Advertisement
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದ ಮುಲಾಜಿಗೆ ಒಳಗಾಗದೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರ ಸಲಹೆಯನ್ನು ಸರಾಸಗಟಾಗಿ ತಿರಸ್ಕರಿಸಬೇಕಿದೆ. ಕೇಂದ್ರ ಹಣಕಾಸು ಸಚಿವೆ ಸಲಹೆ ಒಪ್ಪಿಕೊಂಡು ಸಾಲ ಪಡೆದಿದ್ದೆ ಆದರೆ ಅದರ ಬಡ್ಡಿ ಹೊರೆಯನ್ನು ರಾಜ್ಯದ ಜನರು ಹೊರಬೇಕಾಗುತ್ತದೆ. ನಮ್ಮ ತೆರಿಗೆಯನ್ನು ಕೊಟ್ಟು, ಅದರ ಹಿಡಗಂಟಿನ ಮೇಲೆ ಸಾಲ ಪಡೆದು, ಅದಕ್ಕೆ ಮತ್ತೆ ನಾವೇ ಬಡ್ಡಿ ಕಟ್ಟುವುದು ಎಂತಹ ಶಿಕ್ಷೆ. 25 ಜನ ಸಂಸದರನ್ನು ಆರಿಸಿ ಕಳುಹಿಸಿದ್ದಕ್ಕಾಗಿ ಕನ್ನಡಿಗರಿಗೆ ಈ ಶಿಕ್ಷೆಯೇ ಎಂದು ಪ್ರಶ್ನಿಸಿದ್ದಾರೆ.
ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆ ಹೊರಿಸಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಅತಿವೃಷ್ಠಿ, ಅನಾವೃಷ್ಠಿಗಳಿಗೆ ಪರಿಹಾರ ಜೊತೆ ತೆರಿಗೆ ಪಾಲನ್ನೂ ನಿರಾಕರಿಸಿರುವ ಬಿಜೆಪಿಯ ಈ ನಡೆಯಿಂದಾಗಿ, ಕನ್ನಡಿಗರಿಗೆ ಮೋದಿ ಜಿಎಸ್ ಟಿ ಜೊತೆಗೆ ಆರ್ ಬಿಐ ಸಾಲ + ಬಿಜೆಪಿ ಬಡ್ಡಿಯನ್ನೂ ಪಾವತಿಸುವ ಕರ್ಮ ಎದುರಾಗಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ