Advertisement

FDA Exam: ಆರೋಪಿ ಆರ್. ಡಿ. ಪಾಟೀಲ್ ಜತೆ ಶಾಮೀಲು‌ ನಿಜವಾದರೆ ಕಠಿಣ ಕ್ರಮ: ಪ್ರಿಯಾಂಕ್ ಖರ್ಗೆ

11:17 AM Nov 08, 2023 | Team Udayavani |

ಕಲಬುರಗಿ: ಎಫ್‌ಡಿಎ ಪರೀಕ್ಷೆ ಅಕ್ರಮದ‌ ರೂವಾರಿ‌ ಆರ್.‌ಡಿ.‌ ಪಾಟೀಲ್ ಬಂಧನಕ್ಕೆ ಕಟ್ಟು ನಿಟ್ಟಿನ ಕ್ರಮ‌ ಕೈಗೊಳ್ಳಲಾಗಿದ್ದು, ಕೆಲವೊಮ್ಮೆ‌ಮಾಹಿತಿ ಕೊಟ್ಟರೂ ಕಾರಣಾಂತರಿಂದ ಬಂಧನ ಮಾಡಲಿಕ್ಕಾಗುವುದಿಲ್ಲ.‌ ಕೆಲವೊಮ್ಮೆ ನಮ್ಮವರೇ ಶಾಮೀಲಾಗಿರುತ್ತಾರೆ.‌ ಆದರೆ ಅಧಿಕಾರಿಗಳೇ ಆರ್.ಡಿ‌ ಪಾಟೀಲ್ ಜತೆ ಶಾಮೀಲಾಗಿರುವುದು ಕಂಡು‌ ಬಂದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ‌ ಕೈಗೊಳ್ಳಲಾಗುವುದು‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಆರ್ ಡಿ ಪಾಟೀಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ- ಸಚಿವ ಪ್ರಿಯಾಂಕ್ ಖರ್ಗೆ, ಆರೋಪಿ ಆರ್.‌ಡಿ. ಪಾಟೀಲ್ ಬಂಧನಕ್ಕೆ ಹೋದ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಈಗಾಗಲೇ ಆತನ ಒಂದು ಮೊಬೈಲ್ ಸಿಕ್ಕಿದೆ ಅದನ್ನು ವಿಧಿವಿಜ್ಞಾನ‌ ಸಂಸ್ಥೆಗೆ ಕಳಿಸಲಾಗಿದೆ ತನಿಖೆ ನಡೆಯುತ್ತಿದೆ, ವರದಿ ಬರಲಿ. ಈ ಹಂತದಲ್ಲಿ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಲಾಗದು ಎಂದರು.‌

ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ ಸಚಿವರು, ಸರ್ಕಾರದ ವತಿಯಿಂದ ಏನೇನು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಒಂದಿಬ್ಬರು ಕಾಪಿ ಮಾಡಿರಬಹುದು. ಕೆಲವು ಕಡೆ ಬ್ಲೂಟೂಥ್ ಬಳಕೆಯಾಗಿದೆ. ಕಲಬುರಗಿ ಮಾತ್ರ ಅಲ್ಲದೇ ಯಾದಗಿರಿ, ವಿಜಯಪುರದಲ್ಲಿ, ಹುಬ್ಬಳ್ಳಿಯಲ್ಲಿ ಹಾಗೂ ಬೆಂಗಳೂರಿನಲ್ಲಿಯೂ ಕೂಡಾ ಘಟನೆ ನಡೆದಿವೆ. ಇದರ ಲೋಪಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಪ್ರಕರಣ ಆದರೂ ಅದರ ಗಾಂಭೀರ್ಯತೆ ತಿಳಿದುಕೊಂಡು ಸರ್ಕಾರ ಮುಂದಿನ‌ ಕ್ರಮ ಕೈಗೊಳ್ಳಲಿದೆ. ಓಎಂ ಆರ್ ನಮ್ಮ ಜಿಲ್ಲೆಯಲ್ಲಿ ನಡೆದಿಲ್ಲ ಬೇರೆ ಕಡೆ ನಡೆದಿದೆ. ಓಎಂ ಆರ್ ಹೊರಗಡೆ ಬಂದಿದೆ ಎಂದರೆ ಯಾರಾದರೂ ಮೊಬೈಲ್ ಬಳಸಿರಬಹುದು. ಇದು ರಾಜ್ಯದ ಬೇರೆ ಬೇರೆ ಕಡೆ ನಡೆದಿದೆ. ಹಾಗಾಗಿ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಯುತ್ತಿದೆ ಅದರ ವರದಿ ಆಧರಿಸಿ ಪ್ರಕರಣವನ್ನು ಸಿಓಡಿಗೆ ಅಥವಾ ಸಿಬಿಐಗೆ ಕೊಡುವ ಕುರಿತು ಗೃಹ ಸಚಿವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಖರ್ಗೆ ಹೇಳಿದರು. ‌

ಪಿಎಸ್ಐ ಹಗರಣದಲ್ಲಿ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ.‌ ಆರೋಪಿಗಳ ಮನೆಗೆ ಸ್ವತ: ಗೃಹ ಸಚಿವರೇ ಹೋಗಿದ್ದರು.‌
ಈಗ ನಮ್ಮ ಬಗ್ಗೆ ಹಾಗೂ ಶಾಸಕರ ಬಗ್ಗೆ ಅನುಮಾನಗಳಿದ್ದರೆ ಬಿಜೆಪಿ ದಾಖಲೆ ನೀಡಲಿ ಎಂದರು.‌

Advertisement

ಸರ್ಕಾರಕ್ಕೆ ಯುವಕರ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಈ ಹಿಂದೆ ಅಂತಿಮ ಪಟ್ಟಿ ಪ್ರಕಟಣೆ ಆದ 7 ತಿಂಗಳ ಮೇಲೆ ಸರ್ಕಾರ ಎಚ್ಚೆತ್ತುಕೊಂಡಿತ್ತು. ಆದರೆ ಈಗ ಇಲ್ಲಿ ಹಾಗಾಗಿಲ್ಲ‌. ಯುವಕರ ಭವಿಷ್ಯಕ್ಕಾಗಿ Prevention of Corruption in Government Recruitment ಬಿಲ್ ತಯಾರಿಸುತ್ತಿದ್ದೇವೆ. ಕಳೆದ ಅಧಿವೇಶನದಲ್ಲಿ ಖಾಸಗಿ ಬಿಲ್ ಮೂವ್ ಮಾಡಿದ್ದೆ‌. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ. ಅದು ಈಗಾಗಲೇ ಕಾನೂನು ಸಚಿವರ ಒಪ್ಪಿಗೆ ನಂತರ ಡಿಪಿಆರ್ ಗೆ ಕಳಿಸಿದ್ದಾರೆ. ಸಿಎಂ ಅವರು ಡಿಪಿಆರ್ ತರಿಸಿಕೊಂಡು ಮಂಜೂರು ಮಾಡಿದರೆ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪ್ರಿಯಾಂಕ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.‌

ಇದನ್ನೂಓದಿ: War; ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ…ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆ

Advertisement

Udayavani is now on Telegram. Click here to join our channel and stay updated with the latest news.

Next