Advertisement

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

11:51 PM Nov 12, 2024 | Team Udayavani |

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆ ಸುಗಮಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಬುಧವಾರ ನಡೆಯುವ ಮಹತ್ವದ ಸಭೆ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Advertisement

ಸಭೆಯ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಚಯಗಳು ನಿರ್ಮಾಣಗೊಂಡಿವೆ. ಬಹುಪಾಲು ಆಸ್ತಿ ಗಳು ಗ್ರಾ.ಪಂ. ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣ ದಲ್ಲಿ ಹಿನ್ನಡೆ ಉಂಟಾಗಿದೆ ಎಂದರು.

ಗ್ರಾ.ಪಂ.ಗಳನ್ನು ಸದೃಢಗೊಳಿಸುವಲ್ಲಿ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅನಿವಾರ್ಯ
ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿ ಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದರು.

ಸಮಸ್ಯೆ ಏನು?
-ಗ್ರಾಮಠಾಣದ ಹೊರ ಭಾಗದಲ್ಲಿ ಶಾಲೆ, ಉದ್ದಿಮೆ, ವಸತಿ ಸಮುಚ್ಚಯಗಳು ಸಾಕಷ್ಟಿದ್ದರೂ ತೆರಿಗೆ ವ್ಯಾಪ್ತಿಗೆ ಬಂದಿಲ್ಲ
-ಇದು ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣದಲ್ಲಿ ಹಿನ್ನಡೆಯಾಗಲು ಕಾರಣ

Advertisement

Udayavani is now on Telegram. Click here to join our channel and stay updated with the latest news.

Next