Advertisement

ಯುಪಿ ರಾಜಕೀಯದಲ್ಲಿ ಬದಲಾವಣೆ ನಿಶ್ಚಿತ

01:33 AM Jan 25, 2019 | |

ಚಿಕ್ಕಬಳ್ಳಾಪುರ: ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎನ್ನುವುದು ಪಕ್ಷದ ಕಾರ್ಯಕರ್ತರ ಬಹುದಿನಗಳ ಇಚ್ಛೆ ಹಾಗೂ ಆಕಾಂಕ್ಷೆಯಾಗಿತ್ತು. ರಾಹುಲ್‌ ಗಾಂಧಿ ಈಗ ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ. ಅವರಿಗೆ ಉತ್ತರ ಪ್ರದೇಶ ಉಸ್ತುವಾರಿ ವಹಿಸಿರು ವುದರಿಂದ ಈ ಬಾರಿ ಅಲ್ಲಿ ರಾಜಕೀಯ ಬದಲಾವಣೆ ನಿಚ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ಏನೇ ತಂತ್ರಗಾರಿಕೆ ನಡೆಸಿದರೂ ಸಮ್ಮಿಶ್ರ ಸರ್ಕಾರಕ್ಕೆ ಏನೂ ಧಕ್ಕೆಯಾಗುವುದಿಲ್ಲ. ಅವರ ತಂತ್ರ, ಪ್ರತಿತಂತ್ರಗಳು ಅವರ ಕನಸು ಈಡೇರುವುದಿಲ್ಲ. ಅವರ ಭ್ರಮೆಗಳು ಕೂಡ ಭ್ರಮೆಯಾಗಿಯೇ ಉಳಿಯುತ್ತವೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರ ಗುಂಪುಗಾರಿಕೆಯಿಂದ ಬಳ್ಳಾರಿ ಶಾಸಕರ ನಡುವೆ ಗಲಾಟೆಯಾಗಿದೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ ಎಂಬ ಪ್ರಶ್ನೆಗೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಜೈಲಿಗೆ ಹೋಗಿ ಬಂದವರ ಪ್ರಶ್ನೆಗೆಲ್ಲ ಉತ್ತರ ಕೊಡಕ್ಕೆ ಆಗಲ್ಲ ಎಂದರು.

ಪ್ರಿಯಾಂಕಾ ಎಂಟ್ರಿ ಕಾಂಗ್ರೆಸ್‌ಗೆ ನಷ್ಟ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಹಾಗೂ ಅವರ ಪತಿ ರಾಬರ್ಟ್‌ ವಾದ್ರಾ ಮಹಾನ್‌ ಲೂಟಿಕೋರ ರೆಂಬುದು ಇಡೀ ಜಗತ್ತಿಗೆ ಗೊತ್ತಿದೆ. ಆದ್ದರಿಂದ ಪ್ರಿಯಾಂಕಾ ಅವರನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮಾಡಿದರೆ ಕಾಂಗ್ರೆಸ್‌ಗೆ ಹಾನಿಯಾಗುವುದು ನಿಶ್ಚಿತ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮಾಡಿರುವುದು ಕಾಂಗ್ರೆಸ್‌ನ ಕುಟುಂಬ ರಾಜಕಾರಣಕ್ಕೆ ಮತ್ತೂಂದು ಉದಾಹರಣೆ. ರಾಬರ್ಟ್‌ ವಾದ್ರಾ ಅವರ ಆಸ್ತಿ ಕೆಲವೇ ವರ್ಷಗಳಲ್ಲಿ ಸಹಸ್ರಾರು ಪಟ್ಟು ಹೆಚ್ಚಾಗಿದ್ದು ಹೇಗೆಂಬುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್‌ ಪಕ್ಷ ಎಂದರೆ ಕುಟುಂಬ, ಕುಟುಂಬ ಎಂದರೆ ಪಕ್ಷ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗುವುದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಾಗುವುದಿಲ್ಲ ಎಂದರು

Advertisement

ಮೋದಿಗೆ ನಡುಕ: ಪೂಜಾರಿ

ಮಂಗಳೂರು: ಪ್ರಿಯಾಂಕಾ ಗಾಂಧಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುರಿಂದ ಕಾಂಗ್ರೆಸ್‌ಗೆ ಬಹುದೊಡ್ಡ ಶಕ್ತಿ ಬಂದಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಗೆ ನಡುಕ ಉಂಟಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಅವರನ್ನು ಕರೆಸಿರುವುದರಿಂದ ರಾಹುಲ್‌ ಗಾಂಧಿ ನಾಯಕತ್ವಕ್ಕೂ ಬಲ ಬಂದಂತಾಗಿದೆ. ಹಾಗೆಂದು, ರಾಹುಲ್‌ ಶಕ್ತಿಹೀನ ಎಂದಲ್ಲ. ಅವರಿಗೂ ತಾಕತ್ತು ಇದೆ. ಪ್ರಿಯಾಂಕಾ ಅವರಲ್ಲಿ ಇಂದಿರಾ ಗಾಂಧಿ ಅವರ ವರ್ಚಸ್ಸು ಕಾಣುತ್ತಿದೆ. ಈಗ ಉತ್ತರ ಪ್ರದೇಶದ ಉಸ್ತುವಾರಿಯನ್ನು ನೀಡಿದ್ದಾರೆ. ಮುಂದೆ ಅವರು ಇಡೀ ದೇಶದ ಜವಾಬ್ದಾರಿ ವಹಿಸಿ ಉನ್ನತ ಅಧಿಕಾರಕ್ಕೆ ಏರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್‌ನ್ನು ಮುಗಿಸಲು ಸಿದ್ದರಾಮಯ್ಯ ಅವರೊಬ್ಬರೇ ಸಾಕು. ನಾನು ಮಾಡಿದ್ದೇ ಸರಿ ಎಂಬ ಭಾವನೆ ಸಿದ್ದರಾ ಮಯ್ಯ ಅವರಿಗಿದೆ. ಅವರ ವಿರುದ್ಧ ನನ್ನ ಹೋರಾಟ ಇನ್ನೂ ಮುಂದುವರಿಯಲಿದೆ. ಸಿದ್ದರಾಮಯ್ಯ ಅವರ ಧೋರಣೆಯೇ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನಕ್ಕೂ ಕಾರಣವಾಗಿದೆ. ● ಜನಾರ್ದನ ಪೂಜಾರಿ, ಮಾಜಿ ಕೇಂದ್ರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next