ನವ ದೆಹಲಿ : ಅಡುಗೆ ಅನಿಲ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯುದರ್ಶಿ ಪ್ರಿಯಾಂಕ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಧಾನಿ ನರೇಂದ್ರ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ, ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಇದು ಸಾಮಾನ್ಯ ಮಹಿಳೆಯರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಸಾಮಾನ್ಯ ಮಹಿಳೆಯರ ನೋವಿನ ಬಗ್ಗೆ ನಾವು ಯಾವಾಗ ಮಾತಾಡುವುದು..? ಹಣದುಬ್ಬರವನ್ನು ಇಳಿಸಿ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.
ಇದನ್ನೂ ಓದಿ : ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಹುಟ್ಟೂರಿಗೆ ಆಗಮಿಸಿದ ಉಳ್ಳಾಲದ ಪ್ರಸಾದ್ ಆನಂದ್
ಈ ಹಿಂದೆಯೂ ( ಆಗಸ್ಟ್ 11) ಕೂಡ ಪ್ರಿಯಾಂಕ ಮೋದಿ ಸರ್ಕಾರದ ವಿರುದ್ಧ ಇದೇ ವಿಚಾರಕ್ಕೆ ಸಂಬಂಧಿಸಿ ಕಿಡಿ ಕಾರಿದ್ದರು. ದೇಶದಲ್ಲಿ ಹಣದುಬ್ಬರವಾಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ನೇರಾ ನೇರ ಕಾರಣ. ಉಜ್ವಲ ಎಲ್ ಪಿಜಿ ಸಿಲಿಂಡರ್ ಗಳ ಮೇಲೆ ಬಡವರಿಗೆ ಸಹಾಯಧನ ನೀಡುವಂತೆ ಕೇಂದ್ರವನ್ನು ಆಗ್ರಹಿಸಿದ್ದರು.
ಇನ್ನು, ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ 2.0 (ಪ್ರಧಾನ ಮಂತ್ರಿ ಉಜ್ವಲ ಯೋಜನೆ – ಪಿ ಎಂ ಯು ವೈ) ನನ್ನು ಉತ್ತರ ಪ್ರದೇಶದ ಮಹೋಬದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ ಪಿ ಜಿ ಹಸ್ತಾಂತರಿಸುವ ಮೂಲಕ ಪ್ರಾರಂಭಿಸಿದ್ದರು.
ಇದನ್ನೂ ಓದಿ : ಕೋವಿಡ್19: ಕಳೆದ 160 ದಿನಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸೋಂಕಿನ ಪ್ರಕರಣಗಳು ಪತ್ತೆ..!