ಪ್ರಯಾಗ್ ರಾಜ್: ಉತ್ತರ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ಚರ್ಚೆಗಳು ಕಾವು ಪಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಸುತ್ತ ಚರ್ಚೆಗಳು ನಡೆಯುತ್ತಿದೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಸಲ್ಮಾನ್ ಖುರ್ಷಿದ್ ಅವರು ಹೇಳಿಕೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತಾರೆ ಎಂದರು.
ಇದನ್ನೂ ಓದಿ: ಫುಟ್‌ಪಾತ್ ಸಂಚಾರಕ್ಕೆ ಸಂಚಕಾರ; ಎಚ್ಚರ ತಪ್ಪಿದರೆ ಅಪಾಯಕ್ಕೆ ಆಹ್ವಾನ
“ಯುಪಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಮತ್ತು ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕೇ ಅಥವಾ ಬೇಡವೇ ಎಂಬುದನ್ನು ಸ್ವತಃ ನಿರ್ಧರಿಸುತ್ತಾರೆ” ಎಂದು ಖುರ್ಷಿದ್ ನಿನ್ನೆ ಪ್ರಯಾಗರಾಜ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಪಕ್ಷದ ಅಧ್ಯಕ್ಷರ ಬಗ್ಗೆ ಮಾತನಾಡುತ್ತಾ, “ನಾವು ಈಗಾಗಲೇ ಪಕ್ಷದ ಅಧ್ಯಕ್ಷರನ್ನು ಹೊಂದಿದ್ದೇವೆ ಆದ್ದರಿಂದ ನಮಗೆ ಇನ್ನೊಂದು ಪಕ್ಷದ ಅಧ್ಯಕ್ಷರ ಅಗತ್ಯವಿಲ್ಲ. ನಾವು ತೃಪ್ತರಾಗಿದ್ದೇವೆ. ಹೊರಗಿನ ಜನರು (ಕಾಂಗ್ರೆಸ್) ತೃಪ್ತರಾಗಿಲ್ಲ ಎಂದು ತೋರುತ್ತದೆ. ಎಂದು ಸಲ್ಮಾನ್ ಖುರ್ಷಿದ್ ಹೇಳಿದರು.