ನವ ದೆಹಲಿ : ಉತ್ತರ ಪ್ರದೇದಲ್ಲಿ 2022ರ ಚುನವಣಾ ಕಾವು ಜೋರಾಗಿದೆ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ ಎದುರಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಸುದ್ದಿ ಸಂಸ್ಥೆ ಪಿಟಿಐ ಗೆ ಹೇಳಿಕೆಯೊಂದನ್ನು ನೀಡಿದ್ದಾರೆ.
2022ರ ವಿಧಾನ ಸಬಾ ಚುನಾವಣೆಯನ್ನು ಕಾಂಗ್ರೆಸ್ ಪ್ರಿಯಾಂಕ ಗಾಂಧಿಯವರ ಮುಂದಾಳತ್ವದಲ್ಲೇ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ತಮಿಳುನಾಡು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು, ಸಬ್ ಇನ್ಸ್ ಪೆಕ್ಟರ್ ಬಂಧನ
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಹೇಗಿರಬೇಕು, ಚುನಾವಣಾ ಕಾರ್ಕವೈಖರಿ ಹೇಗಿರಬೇಕು ಎಂಬುವುದನ್ನು ಪ್ರಿಯಾಂಕ ಅವರೇ ನಿರ್ಧರಿಸಿ ನಿರ್ದೇಶಿಸಲಿದ್ದಾರೆ. ಪಕ್ಷದ ಉಸ್ತುವಾರಿಯನ್ನು ಅವರೇ ಮುನ್ನಡೆಸಲಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿಯವರದ್ಧೇ ನೇತೃತ್ವ ಎಂದು ಅವರು ಪ್ರತಿಪಾದಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತನ್ನ ಎಲ್ಲಾ ಶಕ್ತಿಯಿಂದ ರಾಜ್ಯದ ವಿಧಾನ ಸಭಾ ಚುನಾವಣೆಯನ್ನು ಎದುರಸಲಿಕ್ಕಿದೆ. ನಮ್ಮ ಮಟ್ಟಿಗೆ ಅವರೊಬ್ಬ ನಾಯಕಿ. ಅವರು ಪಕ್ಷದ ಮುಂದಾಳತ್ವವನ್ನು ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ರೈತರಿಗೆ ಮತ್ತೊಂದು ಅವಕಾಶ ನೀಡಲು ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ : ಆರ್ ಅಶೋಕ್