Advertisement

ಜನರ ಪ್ರಶ್ನೆಗೆ ಉತ್ತರಿಸಲಾಗದೆ ಪ್ರಿಯಾಂಕಾ ಪ್ರಚಾರಕ್ಕೆ ಬರುತ್ತಿಲ್ಲ !

09:50 AM Feb 16, 2017 | Team Udayavani |

ಕಾನ್ಪುರ : ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್‌ ಗಾಂಧಿ ಪ್ರತಿನಿಧಿಸುವ ಅಮೇಠಿಯಲ್ಲಿ  ಜನರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೆ ಪ್ರಿಯಾಂಕಾ ಚುನಾವಣಾ ಪ್ರಚಾರಕ್ಕೂ ಬರುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ. 

Advertisement

ನೀವು ಉತ್ತರಪ್ರದೇಶದ ಸಿಎಂ ಅಭ್ಯರ್ಥಿಯೆ  ಎಂದು ಸುದ್ದಿಗಾರರು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಪ್ರತಿಯೊಬ್ಬ ಬಿಜೆಪಿ  ಕಾರ್ಯಕರ್ತರಿಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆರಬೇಕೆಂಬುದು ಬಯಕೆಯಾಗಿದೆ ಎಂದರು. 

ನಾನು ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಲ್ಲಿ ಸೋಲನುಭವಿಸಿದ ಹೊರತಾಗಿಯೂ ಕ್ಷೇತ್ರದಲ್ಲಿ ಸಕ್ರಿಯಳಾಗಿ ಜನರ ಕೆಲಸ ಮಾಡಿಕೊಂಡಿದ್ದೇನೆ ಎಂದರು. 

ಇಲ್ಲಿ ಕಳೆದ ಚುನಾವಣೆಗಳಲ್ಲಿ ನೀಡಿದ ಆಶ್ವಾಸನೆಗಳನ್ನು ರಾಹುಲ್‌ ಗಾಂಧಿ ಈಡೇರಿಸಿಲ್ಲ. ಈಗ ಜನರು ಪ್ರಶ್ನೆಗಳನ್ನು ಮುಂದಿಡುತ್ತಿದ್ದು ಚುನಾವಣಾ ಪ್ರಚಾರಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next