Advertisement

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

12:51 AM Dec 24, 2024 | Shreeram Nayak |

ಹೊಸದಿಲ್ಲಿ: ಪರೀಕ್ಷಾ ಅರ್ಜಿ ಫಾರಂಗಳ ಮೇಲೆ ಶೇ.18 ಜಿಎಸ್‌ಟಿ ವಿಧಿಸಲಾಗಿದೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ.

Advertisement

ತಮ್ಮ ಮಕ್ಕಳ ಪರೀಕ್ಷೆಗೆ ಸಿದ್ಧತೆಗಾಗಿ ಪೈಸೆ ಪೈಸೆ ಉಳಿಸುವ ಪೋಷ­ಕರ ಕನಸುಗಳನ್ನು ಸರಕಾ ರವು ಆದಾಯದ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಜಿಎಸ್‌ಟಿ ವಿಧಿಸಿರುವ ಪರೀಕ್ಷಾ ಅರ್ಜಿ ಫಾರಂ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಯುವಕರಿಗೆ ಉದ್ಯೋಗ ನೀಡಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಆದರೆ, ಪರೀಕ್ಷಾ ಫಾರಂಗಳ ಮೇಲೆ ಶೇ.18 ಜಿಎಸ್‌ಟಿ ವಿಧಿಸುವ ಮೂಲಕ ಗಾಯದ ಮೇಲೆ ಉಪ್ಪು ಸವರುತ್ತಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next