Advertisement
ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶದ ಪೂರ್ವ ಭಾಗದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ ಇಂದು(ಮಂಗಳವಾರ, ಆಗಸ್ಟ್ 3) ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Related Articles
Advertisement
ಸಂಸತ್ ಅಧಿವೇಶನಕ್ಕೂ ಮುನ್ನ ಸಂಸತ್ತಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಪ್ಪತ್ತೈದು ಲಕ್ಷ ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಇಂಧನ ತೆರಿಗೆ ರೂಪದಲ್ಲಿ ಜನರಿಂದ ಸಂಗ್ರಹಿಸುತ್ತದೆ. ಆ ಹಣವನ್ನು ಏನು ಮಾಡಲಾಗುತ್ತದೆ..? ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವಂತೂ ಬಳಸುತ್ತಿಲ್ಲ, ಜನರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ..? ಎಂದು ಅವರು ಕೇಂದ್ರ ಸರ್ಕಾರವನ್ನು ಆರೋಪಿಸಿದ್ದರು.
ಬೆಲೆ ಏರಿಕೆ ಕುರಿತು ಪ್ರಿಯಾಂಕಾ ಗಾಂಧಿ ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದ್ದರು. ಜನರಿಗೆ ಸಂಬಂಧಿಸಿದ ಬೆಲೆ ಏರಿಕೆಯಂತಹ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಮೋದಿ ಸರ್ಕಾರ ಹೆದರುತ್ತದೆ “ಎಂದು ಟ್ವೀಟ್ ಮಾಡಿದ್ದರು.
ಜುಲೈ 19 ರಂದು ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದೆ. ಸಂಸತ್ ಅಧಿವೇಶನ ಆರಂಭವಾದಾಗಿನಿಂದ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ಕೃಷಿ ಕಾಯ್ದೆ, ಪೆಗಾಸಸ್ ಪ್ರಕರಣ ಹಾಗೂ ಇಂಧನ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿವೆ.
ಇನ್ನು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಗೊಂದಲಗಳ ನಡುವೆ, ರಾಜ್ಯಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಇಂದು(ಮಂಗಳವಾರ, ಆಗಸ್ಟ್ 3) ಸರ್ಕಾರ ಮತ್ತು ಪ್ರತಿಪಕ್ಷದ ನಾಯಕರನ್ನು ಸಂಸತ್ತಿನಲ್ಲಿನ ಸದ್ಯದ ಬಿಕ್ಕಟ್ಟನ್ನು ಪರಿಹರಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ