Advertisement

ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

10:47 AM Mar 25, 2023 | Team Udayavani |

ನವದೆಹಲಿ: ರಾಹುಲ್ ಗಾಂಧಿ ಅವರು ಲೋಕಸಭಾ ಸಂಸದರಾಗಿ ಅನರ್ಹಗೊಂಡಿದ್ದು ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ದೆಹಲಿಯಲ್ಲಿ ಶುಕ್ರವಾರ ಸಂಜೆ ಈ ವಿಷಯದ ಕುರಿತು ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆದಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ.

Advertisement

ಸಭೆಯಲ್ಲಿ ಉಪಸ್ಥಿತರಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಗೆ ತಕ್ಕ ಪ್ರತ್ಯುತ್ತರವಾಗಿ ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವತ್ತ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ವಿರೋಧಿಸಿ ಕಾಂಗ್ರೆಸ್‌ ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದು ಸಂಸದರೊಬ್ಬರು ಸಲಹೆ ನೀಡಿದ್ದಾರೆ. ಎಎನ್‌ ಐ ಉಲ್ಲೇಖಿಸಿರುವ ಮೂಲಗಳ ಪ್ರಕಾರ, ಈ ವಿಷಯದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ.

ಎಐಸಿಸಿ ಕಚೇರಿಯ ತುರ್ತು ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಮುಖ್ಯಸ್ಥರು, ಸಿಎಲ್‌ ಪಿ ನಾಯಕರು ಮತ್ತು ಮುಂಭಾಗದ ಸಂಘಟನೆಗಳು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರು ಹಾಜರಾಗಿದ್ದರು.

Advertisement

ಎಪ್ರಿಲ್- ಮೇ ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next