Advertisement

bypoll: ನಾಳೆ ವಯನಾಡು ಲೋಕ ಉಪ ಸಮರಕ್ಕೆ ಪ್ರಿಯಾಂಕಾ ನಾಮಪತ್ರ

08:14 PM Oct 21, 2024 | Team Udayavani |

ನವದೆಹಲಿ: ವಯನಾಡ್‌ ಕ್ಷೇತ್ರದ ಉಪಚುನಾವಣೆಗಾಗಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಬುಧವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Advertisement

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಉಪಸ್ಥಿತರಿರಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮೊದಲು ವಯನಾಡ್‌ನ‌ ಕಲ್ಪೆಟ್ಟಾದಲ್ಲಿ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಚುನಾವಣೆಯಲ್ಲಿ ಪ್ರಿಯಾಂಕಾ ಗೆದ್ದರೆ ಮೊದಲ ಬಾರಿಗೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿದ್ದಾರೆ.

ಗಾಂಧಿ ಕುಟುಂಬದ ಸೋನಿಯಾ, ರಾಹುಲ್‌ ಮತ್ತು ಪ್ರಿಯಾಂಕಾ ಸೇರಿ ಮೂವರು ಸಂಸತ್‌ ಸದಸ್ಯರಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next