Advertisement

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

10:52 AM Apr 30, 2024 | Team Udayavani |

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿದೆ.

Advertisement

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ ಇದರ ನಡುವೆ ಪ್ರಿಯಾಂಕಾ ಅವರ ಸ್ಪರ್ಧೆಯ ಕುರಿತು ಮಾಹಿತಿಯೊಂದು ಹೊರಬಿದ್ದಿದೆ.

ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರವನ್ನು ಮಾತ್ರ ಮಾಡಲಿದ್ದಾರೆ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅಮೇಥಿ ಅಥವಾ ರಾಯ್ಬರೇಲಿಯಿಂದ ಸ್ಪರ್ಧಿಸುವ ಬಗ್ಗೆ ಅಂತಿಮ ನಿರ್ಧಾರವನ್ನು 24 ಗಂಟೆಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಗಾಂಧಿ ಸಹೋದರರನ್ನು ಅಮೇಥಿ ಮತ್ತು ರಾಯ್‌ಬರೇಲಿ ಅಭ್ಯರ್ಥಿಗಳನ್ನಾಗಿ ಮಾಡಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಲಾಗಿದೆ ಎಂಬ ಮಾಹಿತಿಯ ಬೆನ್ನಲ್ಲೇ ಈ ಹೊಸ ಬೆಳವಣಿಗೆ ನಡೆದಿದೆ.

ಸಭೆಯಲ್ಲಿ, ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸುವಂತೆ ಒತ್ತಾಯಿಸಲಾಗಿತ್ತು.

Advertisement

ಮೇ 20 ರಂದು ಅಮೇಥಿ ಮತ್ತು ರಾಯ್ಬರೇಲಿ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು 2004 ರಿಂದ 2014 ರವರೆಗೆ ಪ್ರತಿನಿಧಿಸಿದ್ದ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.

ಏಪ್ರಿಲ್ 26 ರಂದು ನಡೆದ ಚುನಾವಣೆಯಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಎರಡನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Advertisement

Udayavani is now on Telegram. Click here to join our channel and stay updated with the latest news.

Next