Advertisement
ಕೇರಳದ ಬ್ರೋಕೆಡ್ ಸೀರೆ, ಕೈಯಲ್ಲಿ ಸಂವಿಧಾನ ಪುಸ್ತಕ ಹಿಡುಕೊಂಡಿದ್ದ ಪ್ರಿಯಾಂಕಾ ಗಾಂಧಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.
Related Articles
ಪ್ರಿಯಾಂಕಾ ಅವರಲ್ಲದೆ, ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕ ರವೀಂದ್ರ ಬಸಂತರಾವ್ ಚವಾಣ್ ಕೂಡ ಇಂದು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚವಾಣ್ ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್ ಚವಾಣ್ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು ಇದರಲ್ಲಿ ರವೀಂದ್ರ ಚವಾಣ್ ಗೆಲುವು ಸಾಧಿಸಿದ್ದರು.
Advertisement
ಸದನದಲ್ಲಿ ಗಾಂಧಿ ಕುಟುಂಬದ 3 ಸದಸ್ಯರು:ಗಾಂಧಿ ಕುಟುಂಬದ ಮೂವರು ಸದಸ್ಯರು ಸಂಸತ್ತಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರೆ, ಅವರ ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸಂಸದರಾಗಿದ್ದಾರೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದಾರೆ. ಇದನ್ನೂ ಓದಿ: Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ