Advertisement

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

01:05 PM Nov 28, 2024 | Team Udayavani |

ನವದೆಹಲಿ: ಮೊನ್ನೆಯಷ್ಟೇ ನಡೆದ ಉಪಚುನಾವಣೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಸ್ಪರ್ಧೆಯಲ್ಲೆ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ(ನ.28) ನೂತನ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಕೇರಳದ ಬ್ರೋಕೆಡ್ ಸೀರೆ, ಕೈಯಲ್ಲಿ ಸಂವಿಧಾನ ಪುಸ್ತಕ ಹಿಡುಕೊಂಡಿದ್ದ ಪ್ರಿಯಾಂಕಾ ಗಾಂಧಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರದ ವೇಳೆ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಅವರಲ್ಲದೆ, ಪತಿ ರಾಬರ್ಟ್, ಅವರ ಮಗ ರೆಹಾನ್ ವಾದ್ರಾ ಮತ್ತು ಮಗಳು ಮಿರಾಯಾ ವಾದ್ರಾ ಸಂಸತ್ ಭವನದಲ್ಲಿ ಉಪಸ್ಥಿತರಿದ್ದು ಜೊತೆಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು.

ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರವೀಂದ್ರ ಚವಾಣ್‌:
ಪ್ರಿಯಾಂಕಾ ಅವರಲ್ಲದೆ, ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕ ರವೀಂದ್ರ ಬಸಂತರಾವ್ ಚವಾಣ್ ಕೂಡ ಇಂದು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚವಾಣ್ ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು ಇದರಲ್ಲಿ ರವೀಂದ್ರ ಚವಾಣ್ ಗೆಲುವು ಸಾಧಿಸಿದ್ದರು.

Advertisement

ಸದನದಲ್ಲಿ ಗಾಂಧಿ ಕುಟುಂಬದ 3 ಸದಸ್ಯರು:
ಗಾಂಧಿ ಕುಟುಂಬದ ಮೂವರು ಸದಸ್ಯರು ಸಂಸತ್ತಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರೆ, ಅವರ ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸಂಸದರಾಗಿದ್ದಾರೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next