ನವದೆಹಲಿ:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ಶುಕ್ರವಾರ(ಜೂನ್ 03) ತಿಳಿಸಿದ್ದಾರೆ.
ಇದನ್ನೂ ಓದಿ:ಆರ್ಥಿಕತೆ ನೆಲಕಚ್ಚಿಸಿದ್ದೇ ಮೋದಿ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಟೀಕೆ
ಆರೋಗ್ಯ ತಪಾಸಣೆ ವೇಳೆ ತೀಕ್ಷ್ಣವಲ್ಲದ ರೋಗಲಕ್ಷಣದೊಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾನು ಕೋವಿಡ್ ಮಾರ್ಗಸೂಚಿಯೊಂದಿಗೆ ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಪ್ರಿಯಾಂಕಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಉತ್ತರಪ್ರದೇಶದಲ್ಲಿ ಬುಧವಾರ ಮತ್ತು ಗುರುವಾರ ನಡೆದ ಕಾಂಗ್ರೆಸ್ ನ ಎರಡು ದಿನಗಳ “ನವ ಸಂಕಲ್ಪ ಕಾರ್ಯಶಾಲಾ” ಸಭೆಯಲ್ಲಿ ಭಾಗವಹಿಸಲೆಂದು ಲಕ್ನೋಗೆ ಬಂದಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗುರುವಾರ ಬೆಳಗ್ಗೆ ದಿಢೀರನೆ ತಮ್ಮ ಕಾರ್ಯಕ್ರಮ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದರು ಎಂದು ವರದಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿತ್ತು. ಆದರೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರೂ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುರ್ಜೇವಾಲಾ ತಿಳಿಸಿದ್ದರು.