Advertisement

Himachal calamity ಪ್ರಧಾನಿ ಮೋದಿಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

06:44 PM Sep 15, 2023 | Team Udayavani |

ನವದೆಹಲಿ: 2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಮೋದಿ ಅವರಿಗೆ ಪತ್ರ ಬರೆದಿರುವ ಪ್ರಿಯಾಂಕಾ ಅವರು ಸಂತ್ರಸ್ತರು ಮತ್ತು ಅವರ ಕುಟುಂಬದವರಿಗೆ ಪರಿಹಾರ ನೀಡಲು ಮತ್ತು ರಾಜ್ಯವನ್ನು ಪುನರ್ನಿರ್ಮಿಸಲು ಆರ್ಥಿಕ ಸಹಾಯ ನೀಡಬೇಕು ಎಂದು ಮೋದಿಗೆ ಬರೆದ ಪತ್ರದಲ್ಲಿ ಪ್ರಿಯಾಂಕಾ ಗಾಂಧಿಯವರು ಕೋರಿದ್ದಾರೆ.

ಹಿಮಾಚಲ ಪ್ರದೇಶವು ದೇವರ ನಾಡು ಎಂಬುದು ಮಾತ್ರವಲ್ಲದೆ, ನಿಜವಾದ, ಸರಳ ಮತ್ತು ಶ್ರಮಜೀವಿಗಳ ರಾಜ್ಯವಾಗಿದೆ.ಅಲ್ಲಿನ ಮಹಿಳೆಯರು ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಯುವ ಪೀಳಿಗೆಯು ತುಂಬಾ ಕಷ್ಟಪಟ್ಟು ಕೆಲಸ ಮಾಡುವವರಾಗಿದ್ದಾರೆ ಮತ್ತು ಸ್ವಾಭಿಮಾನಿಗಳಾಗಿದ್ದಾರೆ. ಇಂದು ಅದೇ ಜನ ಅನಿರೀಕ್ಷಿತ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಜು. 14 ಮತ್ತು 15 ರಂದು ಹಿಮಾಚಲ ಪ್ರದೇಶದ ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳು ಹಾನಿಯನ್ನುಂಟುಮಾಡಿತ್ತು. ಹಿಮಾಚಲ ಪ್ರದೇಶದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದ ಪ್ರಿಯಾಂಕಾ ಅವರು ಅಲ್ಲಿನ ಜನರ ಸಂಕಷ್ಟ ಆಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next