Advertisement

ರಾಜ್ಯದಲ್ಲಿ ಪ್ರಿಯಾಂಕಾ ಪ್ರಚಾರ ಇಲ್ಲ?

12:39 AM Feb 24, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿ ರಾಜಕಾರಣಕ್ಕೆ ಕಾಲಿಟ್ಟಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹೋದರಿ, ಪ್ರಿಯಾಂಕಾ ವಾದ್ರಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವುದು ಅನುಮಾನ ಎಂದೇ ಹೇಳಲಾಗುತ್ತಿದೆ.

Advertisement

ಪ್ರಿಯಾಂಕಾ ವಾದ್ರಾರನ್ನು ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಿಸಿರುವ ರಾಹುಲ್‌ ಗಾಂಧಿ ಅವರು, ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಿಯಾಂಕಾ ವಾದ್ರಾರನ್ನು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜ್ಯ ನಾಯಕರು ರಾಹುಲ್‌ ಎದುರು ಮಾಡಿರುವ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ ಎನ್ನಲಾಗಿದೆ.

ರಾಜ್ಯದ ದೋಸ್ತಿ ಪಕ್ಷಗಳು ಜಂಟಿಯಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿರುವುದರಿಂದ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿಯನ್ನು ಎದುರಿಸುವುದು ಕಷ್ಟವಾಗುವುದಿಲ್ಲ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಪೈಪೋಟಿ ಇರುವುದರಿಂದ ಆ ಭಾಗದ ಜಿÇÉೆಗಳಲ್ಲಿ ಪ್ರಚಾರಕ್ಕೆ ಕರೆತಂದು ಕಮಲ ಪಕ್ಷಕ್ಕೆ ಶಾಕ್‌ ನೀಡಲು ರಾಜ್ಯ ಕಾಂಗ್ರೆಸ್‌ ನಾಯಕರು ಲೆಕ್ಕಾಚಾರ ಹಾಕಿಕೊಂಡಿದ್ದಾ ರೆ. ಸೋನಿಯಾ ಗಾಂಧಿಯವರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ ಎನ್ನಲಾಗುತ್ತಿದೆ. ಅವರು ಸ್ಪರ್ಧೆಯಿಂದ ಹಿಂದೆ ಸರಿದರೆ ಆ ಕ್ಷೇತ್ರದಲ್ಲಿ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ. ಅದೇ ಕಾರಣಕ್ಕೆ ಪ್ರಿಯಾಂಕಾ ವಾದ್ರಾ ಬೇರೆ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದೇ ಹೇಳಲಾಗುತ್ತಿದೆ.

ರಾಹುಲ್‌ 3 ಬಾರಿ ಮಾತ್ರ ಪ್ರಚಾರ
ರಾಹುಲ್‌ ರಾಜ್ಯದಲ್ಲಿ ಕೇವಲ ಮೂರು ಬಾರಿ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ. ಮಾ.9 ರಂದು ಹಾವೇರಿಯಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುವ ಅವರು, ಮಾರ್ಚ್‌ ಕೊನೆಯ ವಾರದಲ್ಲಿ ಹೈದರಾಬಾದ್‌ ಕರ್ನಾಟಕದ ಕಲಬುರಗಿ ಅಥವಾ ಬಳ್ಳಾರಿಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆ ಯುವ ಬೃಹತ್‌ ಸಮಾವೇಶದಲ್ಲಿ ರಾಜ್ಯದ ಅಂತಿಮ ಚುನಾವಣಾ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

40 ಜನ ಸ್ಟಾರ್‌ ಪ್ರಚಾರಕರು
ರಾಹುಲ್‌ ಗಾಂಧಿ ಸೇರಿ 40 ಸ್ಟಾರ್‌ ಪ್ರಚಾರಕರು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಗುಲಾಮ ನಬಿ ಆಝಾದ್‌ ಸೇರಿ ಕೇಂದ್ರದ ಕಾಂಗ್ರೆಸ್‌ ನಾಯಕರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next