ಚಿಕ್ಕೋಡಿ: ಹೈವೋಲ್ಟೇಜ್ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗುರುವಾರ ಚುನಾವಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರಿಗೆ ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಸಿದರು.
ತಂದೆ, ಸಚಿವರಾದ ಸತೀಶ್ ಜಾರಕಿಹೊಳಿಯವರ ಹಾದಿಯಲ್ಲಿ ಸಾಗುತ್ತಿರುವ ಪ್ರಿಯಂಕಾ ಜಾರಕಿಹೊಳಿ ಅವರು ಅವರು ಯಾವುದೇ ಮೆರವಣಿಗೆ, ಆಡಂಬರ ಇಲ್ಲದೇ ಸರಳವಾಗಿಯೇ ನಾಮಪತ್ರ ಸಲ್ಲಿಸುವ ಮೂಲಕ ಸರಳತೆ ಮೆರೆದರು.
ನಾಮಪತ್ರ ಸಲ್ಲಿಸುವಾಗ ಪ್ರಿಯಂಕಾಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ, ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ್ ಸವದಿ, ಗಣೇಶ್ ಹುಕ್ಕೇರಿ, ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ್, ವಿಶ್ವಾಸ ವೈದ್ಯ, ಆಸೀಫ್ (ರಾಜು) ಸೇಠ್, ಮಹಾಂತೇಶ ಕೌಜಲಗಿ, ಬಾಬಾ ಸಾಹೇವ್ ಪಾಟೀಲ್ ಸಾಥ್ ನೀಡಿದರು.
ಅಲ್ಲದೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿಯುವ ತನಕ ಮಾಜಿ ಸಚಿವರಾದ ವೀರಕುಮಾರ ಪಾಟೀಲ್, ಎ.ಬಿ.ಪಾಟೀಲ್, ಮಾಜಿ ಶಾಸಕರಾದ ಕಾಕಾ ಸಾಹೇಬ್ ಪಾಟೀಲ್, ಶ್ಯಾಮ್ ಘಾಟಗೆ, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಉತ್ತಮ ಪಾಟೀಲ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಉತ್ತಮ ಪಾಟೀಲ್. ಕುರುಬ ಸಮಾಜ ಮುಖಂಡ ಸಿದ್ದಪ್ಪ ಮರ್ಯಾಯಿ ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ