Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ.
Related Articles
Advertisement
ಕೇಂದ್ರ ಸರಕಾರ ನಿರ್ದೇಶನದ ಪ್ರಕಾರ ಟೆಸ್ಟಿಂಗ್ ಕೇಂದ್ರಗಳನ್ನು ಹೆಚ್ಚು ಮಾಡಬೇಕು. ಆದರೆ ಇಲ್ಲಿ ಎಷ್ಟು ಹೆಚ್ಚುವರಿ ಸ್ಥಾಪಿಸಲಾಗಿದೆ. ಕಲಬುರಗಿ ಯಲ್ಲಿ ಸಧ್ಯ ಇರುವ ಕೇಂದ್ರಗಳೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು.
ಮಾದರಿ ಸಂಗ್ರಹ ಮಾಡಿದ 24 ಗಂಟೆಯಲ್ಲೇ ವರದಿ ನೀಡಬೇಕು. ಆದರೆ, ಕಲಬುರಗಿಯಲ್ಲಿ ದಿನಗಳು ಕಳೆದರೂ ವರದಿ ಬರುತ್ತಿಲ್ಲ. ಸಮುದಾಯ ತಿಳುವಳಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಇತ್ಯಾದಿ ಜಾರಿಗೆ ತರಲಾಗಿಲ್ಲ. ಸ್ಥಳೀಯ ಆಡಳಿತ ಈ ಕುರಿತು ಯಾವ ಕ್ರಮ ಕೈಗೊಂಡಿದೆ ಎಂದು ಪ್ರಿಯಾಂಕ್ ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ:ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು?
ಕಳೆದ ಹತ್ತು ತಿಂಗಳಿಂದ ಕಾಲೇಜುಗಳು ಬಂದ್ ಆಗಿವೆ. ಈಗ ಸರಕಾರ ಪುನಾರಂಭಕ್ಕೆ ತಯಾರಿ ನಡೆಸಿದೆ. ಈ ಕುರಿತು ಒಂದು ಸ್ಪಷ್ಟ ನೀಲ ನಕ್ಷೆ ತಯಾರಾಗಿಲ್ಲ. ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವಂತೆ ಹೇಳಲಾಗುತ್ತದೆ. ವಿದ್ಯಾರ್ಥಿಗಳು ಎಷ್ಟು ಸಲ ತರಬೇಕು.
ರಜೆಗೆಂದು ಬೇರೆ ಊರಿಗೆ ಹೋದವರು ಎಷ್ಟು ಸಲ ವರದಿ ತರಬೇಕು? ಹಾಸ್ಟೆಲ್ ನಲ್ಲಿ ವಾಸಿಸುವ ವಿದ್ಯಾರ್ಥಿಗಳ ಸ್ಥಿತಿ ಹೇಗೆ? 20 – 25 ಸಾವಿರ ವಿದ್ಯಾರ್ಥಿಗಳು ಹಾಗೂ 5 ಸಾವಿರ ಭೋದಕ ಹಾಗೂ ಇತರೆ ಸಿಬ್ಬಂದಿಗಳು ಮಾದರಿ ಪರೀಕ್ಷೆಗೆ ಎಲ್ಲಿ ಹೋಗಬೇಕು? ಕಲಬುರಗಿ ಜಿಲ್ಲೆಯಲ್ಲಿ ಇರುವ 16 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿಲ್ಲ ಎಂದು ಸರಕಾರದ ನಿರ್ಲಕ್ಷದ ವಿರುದ್ಧ ಪ್ರಶ್ನೆ ಮಾಡಿದ್ದಾರೆ.