Advertisement

Wayanad; ನಾಳಿನ ವಯನಾಡ್ ಭೇಟಿಯನ್ನು ಮುಂದೂಡಿದ ರಾಹುಲ್, ಪ್ರಿಯಾಂಕಾ

10:37 AM Jul 31, 2024 | Team Udayavani |

ಹೊಸದಿಲ್ಲಿ: ಭಾರೀ ಭೂಕುಸಿತದಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ಕೇರಳದ ವಯನಾಡ್ ಗೆ ಸಂಸದ ರಾಹುಲ್ ಗಾಂಧಿ ಅವರು ನಿಗದಿಯಾಗಿದ್ದ ಗುರುವಾರದ ಭೇಟಿಯನ್ನು ಮುಂದೂಡಿದ್ದಾರೆ.

Advertisement

”ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶ ಮತ್ತು ಕುಟುಂಬದವರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ನಾವು ಅಲ್ಲಿ ತಲುಪಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಆದಷ್ಟು ಬೇಗ ಭೇಟಿ ನೀಡುತ್ತೇವೆ ಎಂದು ನಾನು ವಯನಾಡ್ ಜನರಿಗೆ ಭರವಸೆ ನೀಡಲು ಬಯಸುತ್ತೇನೆ. ಈ ಮಧ್ಯೆ, ನಾವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ವಯನಾಡಿನ ಜನರೊಂದಿಗೆ ಇವೆ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Wayanad ನಲ್ಲಿ ಘೋರ ದೃಶ್ಯಗಳು: 143 ಕ್ಕೇರಿದ ಸಾವಿನ ಸಂಖ್ಯೆ

ರಾಜ್ಯಸಭೆಯ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ” ರಾಷ್ಟ್ರೀಯ ವಿಪತ್ತಾಗಿರುವ ವಯನಾಡಿನ ದುರದೃಷ್ಟಕರ ಘಟನೆ ಪರಿಸ್ಥಿತಿಯನ್ನು ನಾವೆಲ್ಲರೂ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅಲ್ಲಿಗೆ ಭೇಟಿ ನೀಡಲಿದ್ದಾರೆ. ಪಕ್ಷದ ಕಾರ್ಯಕರ್ತರು ಪುನರ್ವಸತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಪರಿಹಾರ, ವೈದ್ಯಕೀಯ ನೆರವು ಮತ್ತು ಪರಿಹಾರವನ್ನು ನೀಡುವಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದಿಂದ ಅರೋಗ್ಯ ಸಚಿವ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

Advertisement

ಕಾಂಗ್ರೆಸ್ ಸಂತಾಪ
ಸಂಸತ್ತಿನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾಸಭೆಯಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next