Advertisement

ಪ್ರಿಯಾಂಕಾ ವಾದ್ರಾ ಸ್ಪರ್ಧೆ ಇಲ್ಲ

12:55 AM Mar 14, 2019 | |

ಹೊಸದಿಲ್ಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹಾಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಅವರು ಸಂಪೂರ್ಣವಾಗಿ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ನ ಮೂಲಗಳು ದೃಢಪಡಿಸಿವೆ. 

Advertisement

ಅವರಿಗೆ ನೀಡಲಾಗಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ, ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಪ್ರಚಾರ ಮತ್ತು ಇತರ ಚುನಾವಣ ಪ್ರಚಾರ ತಂತ್ರ ರಚನೆಯಲ್ಲಿ ನೆರವಾಗಲಿದ್ದಾರೆ.  ಮತ್ತೂಂದು ಬೆಳವಣಿಗೆಯಲ್ಲಿ ಮೀರತ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭೀಮ್‌ ಆರ್ಮಿ ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ ಆಜಾದ್‌ರನ್ನು ಪ್ರಿಯಾಂಕಾ ವಾದ್ರಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next