Advertisement

ಪ್ರಿಯಾಂಕಾಗೆ ಪ್ರ. ಕಾರ್ಯದರ್ಶಿ ಹುದ್ದೆ?

08:54 AM Dec 16, 2017 | |

ಬೆಂಗಳೂರು: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ಬೆನ್ನಲ್ಲೇ ಬಹುದಿನಗಳ ಕಾಂಗ್ರೆಸ್‌ ಕಾರ್ಯಕರ್ತರ ಬೇಡಿಕೆಗೆ ಮನ್ನಣೆ ಸಿಗುವ ಲಕ್ಷಣಗಳು ಕಾಣುತ್ತಿವೆ. ಗಾಂಧಿ ಕುಟುಂಬದ ಪ್ರಿಯಾಂಕಾ ಗಾಂಧಿಗೆ ಅಧಿಕೃತ ಪಕ್ಷದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ರಾಹುಲ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಜನವರಿಯಲ್ಲಿ ಎಐಸಿಸಿ ಪುನಾರಚನೆ ಆಗಲಿದ್ದು, ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಅಲ್ಲದೆ, 2019ರ ಲೋಕಸಭೆ ಚುನಾವಣೆಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿಯೂ ಅವರನ್ನು ನೇಮಕ ಮಾಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿವೆ.

Advertisement

ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಬರಬೇಕೆಂಬ ಬೇಡಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿದೆ. ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದು ಪಕ್ಷ ಸಂಘಟನೆ ಜವಾಬ್ದಾರಿ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸುವ ನಿರ್ಧಾರ ಕೈಗೊಳ್ಳುವ ಮೂಲಕ ಪಕ್ಷಕ್ಕೆ ಮತ್ತಷ್ಟು ಹುಮ್ಮಸ್ಸು ತುಂಬುವ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next