ಕಲಬುರಗಿ: ನಗರದಲ್ಲಿ ಇತ್ತೀಚೆಗೆ ನಡೆದ 36ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪುರಸ್ಕೃತರನ್ನು ಶರಣಬಸವ ವಿಶ್ವವಿದ್ಯಾಲಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಮಂಗಳವಾರ ವಿವಿ ಸಮಾವೇಶ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಕಲಬುರಗಿ ಬ್ರಾಡ್ ಪ್ರಶಸ್ತಿ ಪುರಸ್ಕೃತರಾದ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿ ಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿ ಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಸೇರಿದಂತೆ ಕಲಬುರಗಿ ಬ್ರಾÂಂಡ್ ಪ್ರಶಸ್ತಿ ಪುರಸ್ಕೃತ ಪ್ರಶಾಂತ ಬಿಜಾಸ್ಪುರ್, ಪತ್ರಕರ್ತರ ಸಮ್ಮೇಳನದಲ್ಲಿ ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ, ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡೀನ್ ಟಿ.ವಿ.ಶಿವಾನಂದನ್ ಅವರನ್ನು ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್ ವಿ. ನಿಷ್ಠಿ ಸನ್ಮಾನಿಸಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಡಾ| ಶರಣಬಸವಪ್ಪ ಅಪ್ಪ ಪರವಾಗಿ ಸನ್ಮಾನ ಸ್ವೀಕರಿಸಿದರು.
ಕೇಂದ್ರ ಸರ್ಕಾರದಿಂದ ಇನ್‌ಕ್ರೆಡಿಬಲ್ ಇಂಡಿಯಾ (ಕರ್ನಾಟಕ ಚಾಪ್ಟರ್) ಸದಸ್ಯೆಯಾಗಿ ನೇಮಕವಾಗಿರುವ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ ಚೇರ್‌ಪರ್ಸನ್ ಪ್ರೊ| ವಾಣಿಶ್ರೀ ಅವರ ಸಾಧನೆಗಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ನಿರಂಜನ್ ನಿಷ್ಠಿ, ಸಾಧನೆಗೆ ಪ್ರಶಸ್ತಿ ದೊರಕಿರು ವುದು ಪ್ರಶಸ್ತಿ ಮೌಲ್ಯ ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ ಎಂದರು.
ವಿಶ್ವವಿದ್ಯಾಲಯ ಕುಲಸಚಿವ ಡಾ| ಅನಿಲಕುಮಾರ ಬಿಡವೆ ಅಧ್ಯಕ್ಷೀಯ ಭಾಷಣದಲ್ಲಿ ಮೂರು ಪ್ರಶಸ್ತಿ ಪುರಸ್ಕೃತರ ಮತ್ತು ಪ್ರೊ| ವಾಣಿಶ್ರೀ ಅವರ ಸಾಧನೆಗಳನ್ನು ಪ್ರಶಂಸಿಸಿದರು. ಸನ್ಮಾನ ಸ್ವೀಕರಿಸಿ ಪ್ರಶಾಂತ ಬಿಜಾಸಪುರ ಮಾತನಾಡಿ, ತಮ್ಮ ಪ್ರಶಸ್ತಿಯನ್ನು ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಗೆ ಸಮರ್ಪಿಸುವುದಾಗಿ ತಿಳಿಸಿದರು. ಟಿ.ವಿ. ಶಿವಾನಂದನ್, ಪ್ರೊ| ವಾಣಿಶ್ರೀ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಚೆನ್ನಪ್ಪ ಸ್ವಾಗತಿಸಿದರು, ವಿದ್ಯಾರ್ಥಿ ರಘುವೀರ್ ಸಿಂಗ್ ನಿರೂಪಿಸಿದರು, ಸೂಷ್ಮಾ ವಂದಿಸಿದರು.