Advertisement
ಅವರು ಬುಧವಾರ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿಪ್ರೊ|| ಸಿಎನ್ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಪ್ರಶಸ್ತಿ 2020 ಪ್ರದಾನ ಮಾಡಿ ಮಾತನಾಡಿದರು.
ಈಗಿನ ಕಾಲಮಾನದಲ್ಲಿ ನವೀಕೃತ ಇಂಧನಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತಿದೆ. ಪರಿಸರಸ್ನೇಹಿಯಾದ, ಪ್ರಕೃತಿಯಲ್ಲಿ ಹೇರಳವಾಗಿ ಕಡಿಮೆ ವೆಚ್ಚದಲ್ಲಿ ಪಡೆಯಬಹುದಾಗಿದೆ. ನವೀಕೃತ ಇಂಧನವನ್ನು ವಿವಿಧ ಮಾದರಿಯಲ್ಲಿ ಬಳಕೆಗೆ ದೊರೆಯುವಂತೆ ಮಾಡುವುದು ಒಂದು ಸವಾಲಾಗಿದೆ. ಸೌರಶಕ್ತಿ, ಪವನಶಕ್ತಿ ಸೇರಿದಂತೆ ಯಾವುದೇ ರೀತಿಯ ನವೀಕೃತ ಇಂಧನಗಳ ಸಂಗ್ರಹ ಸವಾಲಾಗಿ ಪರಿಣಮಿಸಿದೆ. ಜಲವಿದ್ಯುತ್ ಯೋಜನೆಗಳಲ್ಲಿ ಸೌರಶಕ್ತಿಯನ್ನು ಬಳಸಲು ಸಂಶೋಧನೆಗೆ ಸರ್ಕಾರ ಪ್ರಾಮುಖ್ಯತೆ ನೀಡುತ್ತಿದೆ. ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ವಿಜ್ಞಾನ ಮಾನವನ ಒಳಿತಿಗೆ ಬಳಕೆಯಾಗಬೇಕೇ ಹೊರತು ವಿನಾಶಕ್ಕೆ ಕಾರಣವಾಗಬಾರದು. ಇಂಧನ ಶಕ್ತಿಗಳ ಸಂಶೋಧನೆ ಹಾಗೂ ಅದರ ಸದ್ಬಳಕೆ ಉತ್ತಮ ರೀತಿಯಲ್ಲಿ ಆಗಬೇಕಿದೆ ಎಂದು ತಿಳಿಸಿದರು.