ಒಟ್ಟಾವಾ: ಖಲಿಸ್ತಾನಿ ಬೆಂಬಲಿಗರು ಭಾನುವಾರ(ನ.3) ರಂದು ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಇದರ ನಡುವೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ(ನ.4) ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿದ ಅವರು ಭಾನುವಾರ ಬ್ರಾಂಪ್ಟನ್‌ನ ದೇವಸ್ಥಾನದಲ್ಲಿ ಹಿಂದೂ ಭಕ್ತರ ಮೇಲೆ ಖಾಲಿಸ್ತಾನಿಗಳು ನಡೆದ ದಾಳಿಯನ್ನು ಖಂಡಿಸಿದ್ದಾರೆ, ದೇಶದಲ್ಲಿ ಹಿಂಸಾಚಾರಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಭಾರತ–ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಶನಿವಾರ ದೀಪಾವಳಿ ಆಚರಣೆಯಲ್ಲಿ ಭಾಗಿಯಾಗಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.ಅಲ್ಲದೆ ಇದೇ ಸಂದರ್ಭದಲ್ಲಿ ಕೆನಡಾದಲ್ಲಿರುವ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿದ್ದರು ಅಷ್ಟು ಮಾತ್ರವಲ್ಲದೆ ದೇವಸ್ಥಾನದಲ್ಲಿ ನೀಡಿರುವ ಕೆಂಪು ದಾರವನ್ನು ಕೈಗೆ ಕಟ್ಟಿಕೊಂಡಿದ್ದು ಇದರ ವಿಡಿಯೋ X ನಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಖಾಲಿಸ್ತಾನಿಗಳು ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯಕ್ಕೆ ದಾಳಿ ನಡೆಸಿ ಅಲ್ಲಿದ್ದ ಹಿಂದೂ ಭಕ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅತಿರೇಕದ ವರ್ತನೆ ಖಾಲಿಸ್ತಾನಿಗಳು ಅತಿರೇಕದ ವರ್ತನೆಯನ್ನು ತೋರೋಸುತಿದ್ದಾರೆ ಎಂದು ಕಿಡಿಕಾರಿದ್ದಾರೆ.