ಹೋಶಿಯಾರ್ ಪುರ( ಪಂಜಾಬ್) : ಖಲಿಸ್ಥಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ನ ಆಪ್ತ ಸಹಾಯಕ ಪಾಪಲ್ಪ್ರೀತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಹೋಶಿಯಾರ್ ಪುರದಲ್ಲಿ ಸೋಮವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಖಲಿಸ್ಥಾನಿ ಬೋಧಕ ಅಮೃತಪಾಲ್ ಸಿಂಗ್ ಮತ್ತು ಸಹಾಯಕ ಪಾಪಲ್ಪ್ರೀತ್ ಸಿಂಗ್ ದಮನ ಕಾರ್ಯಾಚರಣೆ ಆರಂಭವಾದ ಬಳಿಕ ನಂತರ ವಿವಿಧ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು ಎಂದು ಪಂಜಾಬ್ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್ಪುರ್ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಾಪಲ್‌ಪ್ರೀತ್ ಫಗ್ವಾರಾ ಪಟ್ಟಣ, ನಾದ್ಲೋನ್ ಗ್ರಾಮ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಕಂಡುಕೊಂಡಿದ್ದಾರೆ.
ಮಾರ್ಚ್ 18 ರಂದು ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ಪ್ರಾರಂಭಿಸಿದಾಗಿನಿಂದ ಮತ್ತು ಅವರ ಖಲಿಸ್ಥಾನ್ ಪರ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಸದಸ್ಯರು ನಾಪತ್ತೆಯಾಗಿದ್ದಾರೆ.