Advertisement

Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ

11:14 PM Nov 11, 2024 | Team Udayavani |

ಬೆಂಗಳೂರು: “ಮೋದಿಗೆ ಮತ ಹಾಕಿದರೆ ಅದೇ ನನಗೆ ಉಡುಗೊರೆ (ಗಿಫ್ಟ್) ನೀಡಿದಂತೆ’ ಎಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಅಚ್ಚು ಹಾಕಿಸಿಕೊಂಡದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ಗ್ರಾಮದ ಮದುಮಗ ಶಿವಪ್ರಸಾದ್‌ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಚುನಾವಣಾಧಿಕಾರಿ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

Advertisement

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಶಿವಪ್ರಸಾದ್‌ ಹಾಗೂ ಆಮಂತ್ರಣ ಪತ್ರಿಕೆಯ ಮುದ್ರಕ ಎ. ಬಾಲಕೃಷ್ಣ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲ ಎಂ. ವಿನೋದ್‌ ಕುಮಾರ್‌ ವಾದ ಮಂಡಿಸಿ, 2024ರ ಮಾರ್ಚ್‌ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಚುನಾವಣೆ ನೀತಿಸಂಹಿತೆ ಜಾರಿಯಾಗಿರುವುದು ಮಾ. 16ರಂದು. ಆಹ್ವಾನಪತ್ರಿಕೆ ಮುದ್ರಣ ಮಾಡಿಸಿದಾಗ ನೀತಿ ಸಂಹಿತೆ ವಿಚಾರವೇ ಇರಲಿಲ್ಲ. ಆದರೂ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು ಕಾನೂನು ಬಾಹಿರವಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next