Advertisement

ಪಾಕ್‌ ಪರ ಘೋಷಣೆ: ಅಮೂಲ್ಯ ಎಸ್‌ಐಟಿ ವಶಕ್ಕೆ

11:39 PM Feb 25, 2020 | Team Udayavani |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಲಿಯೋನಾಳನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಮಂಗಳ ವಾರ ರಾತ್ರಿ ವಶಕ್ಕೆ ಪಡೆದುಕೊಂಡಿದೆ.

Advertisement

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅಮೂಲ್ಯಾಳನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ನ್ಯಾಯಾಧಿಶರ ಮುಂದೆ ಹಾಜರುಪಡಿಸಿ ಎಸ್‌ಐಟಿ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಇದಕ್ಕೂ ಮೊದಲು ಮಂಗಳವಾರ ಬೆಳಗ್ಗೆ ಐದನೇ ಎಸಿಎಂಎಂ ನ್ಯಾಯಾ ಲಯಕ್ಕೆ ಅರ್ಜಿ ಸಲ್ಲಿಸಿ, 10 ದಿನ ವಶಕ್ಕೆ ನೀಡುವಂತೆ ಎಸ್‌ಐಟಿ ಮನವಿ ಮಾಡಿತ್ತು.

ಇದೇ ವೇಳೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕಷ್ಟವಾಗುತ್ತದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಅವಕಾಶಕ್ಕೆ ಕೋರಿತ್ತು. ಅದಕ್ಕೆ ಪ್ರತಿಕ್ರಿಯಿರುವ ಕೋರ್ಟ್‌, ಆರೋಪಿಯನ್ನು ಖುದ್ದು ನ್ಯಾಯಾಲಯಕ್ಕೆ ಹಾಜರು ಪಡಿಸದ ಹೊರತು ಯಾವುದೇ ಕಸ್ಟಡಿ ನೀಡುವುದಿಲ್ಲ. ಕೋರ್ಟ್‌ಗೆ ಹಾಜರು ಪಡಿಸ ಲೇಬೇಕೆಂದು ಸೂಚಿಸಿತ್ತು.

ಈ ಹಿನ್ನೆಲೆ ಯಲ್ಲಿ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಂಡಿತು. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರು ಪಡಿಸುವಾಗ ಜನಾಕ್ರೋಶ ವ್ಯಕ್ತವಾಗಿ ಗದ್ದಲ ಸೃಷ್ಟಿಯಾಗಿತ್ತು. ಅಮೂಲ್ಯ ಮೇಲೂ ದಾಳಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರು ಪಡಿಸುವುದು ಬೇಡ ಎಂದು ನಿರ್ಧರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next