Advertisement
ಪಾಕ್ ಪರ ಘೋಷಣೆ ಕೂಗಿದ್ದಾರೆನ್ನಲಾದ ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಹಾಗೂ ಇಲ್ತಾಜ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಫೆ.27 ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸಿರ್ ಹುಸೇನ್ ಜಯಗಳಿಸಿದ ಬಳಿಕ ವಿಧಾನಸೌಧದ ಆವರಣದಲ್ಲೇ ಆರೋಪಿಗಳು ಪಾಕ್ ಪರ ಘೋಷಣೆ ಕೂಗಿದ್ದರು. ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯಲ್ಲೂ ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾಗಿತ್ತು. ನಂತರ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದರು. Advertisement
Pro Pak Slogan: ಪಾಕ್ ಪರ ಘೋಷಣೆ; 3 ಆರೋಪಿಗಳಿಗೆ ಜಾಮೀನು ಮಂಜೂರು
09:55 PM Mar 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.