ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಯುಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಪೊಲೀಸ್ ಅತಿಥಿಯಾಗಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ.
ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ ಮುಲ್ಲಾ ಎಂಬಾತ ಇನ್ಸ್ಟಾಗ್ರಾಂನಲ್ಲಿ ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಸ್ಟೋರಿ ಹಾಕಿದ್ದ.
ಇಬ್ರಾಹಿಂ ಮುಲ್ಲಾನ ಇನ್ಸ್ಟಾಗ್ರಾಂ ವೀಕ್ಷಿಸಿದ ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ತಾಳಿಕೋಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು, ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಪಾಕಿಸ್ತಾನ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಇಬ್ರಾಹಿಂ ಮುಲ್ಲಾ ಇದೀಗ ತಾಳಿಕೋಟೆ ಪೊಲೀಸರಿಂದ ಬಂಧಿಸಲ್ಪಟ್ಟು, ನ್ಯಾಯಾಂಗ ಬಂಧನಕ್ಕೆ ಕಳಿಸಲ್ಪಟ್ಟಿದ್ದಾನೆ