Advertisement

Eid Milad ಮೆರವಣಿಗೆ ವೇಳೆ ರಾಜ್ಯದ ಕೆಲವೆಡೆ ಪ್ಯಾಲೆಸ್ತೀನ್ ಪರ ಘೋಷಣೆ!

06:17 PM Sep 16, 2024 | Team Udayavani |

ಬೆಂಗಳೂರು: ರಾಜ್ಯದ ವಿವಿಧೆಡೆ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಮೊಳಗಿರುವ ಘಟನೆ ಸೋಮವಾರ(ಸೆ16) ನಡೆದಿದೆ.

Advertisement

ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ನಡೆದ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಮೆರವಣಿಗೆ ಉದ್ದಕ್ಕೂ ನೂರಾರು ಮಂದಿ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದಾರೆ.

ಪ್ಯಾಲೆಸ್ತೀನ್ ಬಾವುಟಗಳನ್ನೂ ಹಿಡಿದು ಯುವಕರು ಘೋಷಣೆ ಕೂಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಡಿವೈ ಎಸ್ ಪಿ ದಿನಕರ್ ಬಾವುಟಗಳನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರದಲ್ಲೂ ಪ್ಯಾಲೆಸ್ತೀನ್ ಪರ ಘೋಷಣೆ ಮೊಳಗಿರುವ ಬಗ್ಗೆ ವರದಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ವಯಸ್ಕರು ವಶಕ್ಕೆ
ಚಿಕ್ಕಮಗಳೂರಿನಲ್ಲೂ ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿರುವ ವಿಡಿಯೋ ಹರಿದಾಡುತ್ತಿದೆ.

Advertisement

ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಆರು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚಿಕ್ಕಮಗಳೂರು ಪಟ್ಟಣದ ದಂಟರಮಕ್ಕಿ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ.

ಕೃತ್ಯ ಎಸಗಿರುವವರ ಹಿಂದಿರುವ ಜಾಲವನ್ನು ನಾಶಪಡಿಸುವ ಸಲುವಾಗಿ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಬಿಜೆಪಿ ನಾಯಕ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next