ಹೊಸದಿಲ್ಲಿ: ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ತೋರುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಕಾಂಗ್ರೆಸ್ ಖಂಡಿತವಾಗಿಯೂ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢವನ್ನು ಗೆಲ್ಲಲಿದೆ, ಬಹುಶಃ ತೆಲಂಗಾಣವನ್ನು ಗೆಲ್ಲುತ್ತದೆ ಮತ್ತು ರಾಜಸ್ಥಾನದಲ್ಲಿ “ತುಂಬಾ ನಿಕಟ” ಸ್ಪರ್ಧೆಯಿದ್ದು ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದ್ದಾರೆ.
ಅಸ್ಸಾಂನ ಪ್ರತಿದಿನ್ ಮೀಡಿಯಾ ನೆಟ್‌ವರ್ಕ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಸೆಳೆಯುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಲೋಕಸಭೆಯಲ್ಲಿ ಬಿಎಸ್‌ಪಿ ನಾಯಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿದ ರಾಹುಲ್ , ಜಾತಿ ಜನಗಣತಿಯ ಬೇಡಿಕೆಯಿಂದ ವಿಚಲಿತರಾಗಲು ಬಿಜೆಪಿ ಇಂತಹ ತಂತ್ರಗಳಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಪ್ರತಿಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿವೆ ಮತ್ತು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಅಚ್ಚರಿ ನೀಡಲಿವೆ ಎಂದು ಪ್ರತಿಪಾದಿಸಿದರು.
“ನಾವು ಕರ್ನಾಟಕದಲ್ಲಿ ಏನು ಮಾಡಿದ್ದೇವೆ ಎಂದರೆ ಸ್ಪಷ್ಟವಾದ ದೃಷ್ಟಿಕೋನವನ್ನು ನೀಡಿದ್ದೇವೆ, ‘ಇದು ನಾವು ನಿಮಗಾಗಿ ಸ್ಥಾಪಿಸಲಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಈಡೇರಿಸಿ ತೋರಿಸುತ್ತೇವೆ ಎಂದರು.