Advertisement
ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. 2011ನೇ ಸಾಲಿನ ಹುದ್ದೆಗಳ ಪೊಲೀಸ್ ಹಾಗೂ ವೈದ್ಯಕೀಯ ಪರಿಶೀಲನೆ ನಡೆಯುತ್ತಿದೆ. 2014ನೇ ಸಾಲಿನ 464 ಹುದ್ದೆಗಳ ನೇಮಕಾತಿಗೆ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
Related Articles
ಗೆಜೆಟೆಡ್ ಪ್ರಬೋಷನರ್ ಹುದ್ದೆಗಳ ಭರ್ತಿ ವೇಳೆ ಕೇಂದ್ರ ಲೋಕಸೇವಾ ಆಯೋಗ ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಆಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ಅರ್ಜಿ ಶುಲ್ಕ ವಿನಾಯ್ತಿ ನೀಡಲು ಯೋಚಿಸಿದೆ. ಅದರಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸು ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಪೂರ್ಣ ಅರ್ಜಿ ಶುಲ್ಕ ವಿನಾಯ್ತಿ ನೀಡಬೇಕು ಎಂಬ ಕೋಟಾ ಶ್ರೀನಿವಾಸ ಪೂಜಾರಿ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
Advertisement