Advertisement

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

05:10 PM Dec 16, 2024 | Team Udayavani |

ಹೊಸದಿಲ್ಲಿ: ಆಪಾದಿತ ಅವ್ಯವಹಾರಗಳಿಗಾಗಿ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವ ಭಾರತೀಯ ಸ್ಪರ್ಧಾತ್ಮಕ ಆಯೋಗದ ಆದೇಶವನ್ನು ಪ್ರಶ್ನಿಸಿ ಇ-ಕಾಮರ್ಸ್ ದೈತ್ಯ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ಗಳ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ(ಡಿ16) ಹೇಳಿದೆ.

Advertisement

ಇ-ಕಾಮರ್ಸ್ ಕಂಪನಿಗಳು ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್‌ಗಳಿಂದ ಉನ್ನತ ನ್ಯಾಯಾಲಯ ಅಥವಾ ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಸಿಸಿಐ(Competition Commission of India) ಸಲ್ಲಿಸಿದ ಮನವಿಯ ಮೇಲೆ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಮನಮೋಹನ್ ಅವರ ಪೀಠವು ನೋಟಿಸ್ ಜಾರಿ ಮಾಡಿದೆ.

“ನೋಟಿಸ್ ನೀಡಿ. ಮೇಲ್ನೋಟಕ್ಕೆ, ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ, ”ಎಂದು ಪೀಠವು ಹೇಳಿ ಮುಂದಿನ ವಿಚಾರಣೆಯನ್ನು 2025 ಜನವರಿ 6 ಕ್ಕೆ ಮುಂದೂಡಿತು.

ಆದಾಗ್ಯೂ, ಇ-ಕಾಮರ್ಸ್ ಕಂಪನಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next