ಕೊಲ್ಕತ್ತಾ: ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಸಚಿವರ ಮನೆ ಸೇರಿದಂತೆ ಕೋಲ್ಕತ್ತಾದ 13 ಸ್ಥಳಗಳಲ್ಲಿ ಇಡಿ ಅಡಿಕ್ರಿಗಳ ತಂಡ ದಾಳಿ ನಡೆಸಿ ಶೋಧ ನಡೆಸುತ್ತಿದೆ.
ಘೋಷ್ ಅವರು ಮಧ್ಯಮಗ್ರಾಮ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದು, ಸರ್ಕಾರಿ ಉದ್ಯೋಗಗಳಿಗೆ ಅನರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಷ್ಟು ಮಾತ್ರವಲ್ಲದೆ ಘೋಷ್ ಮತ್ತು ಅವರ ಸಹಚರರು ಉದ್ಯೋಗಕ್ಕಾಗಿ ಅಭ್ಯರ್ಥಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಮೇಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿದ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ: Flash Flood: ಜಲಪ್ರಳಯಕ್ಕೆ ನಲುಗಿದ ಸಿಕ್ಕಿಂ: 14 ಮೃತ್ಯು, 23ಯೋಧರ ಸಹಿತ 102ಮಂದಿ ನಾಪತ್ತೆ