Advertisement

ಸಮಸ್ಯೆ ಅರಿಯಲು ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ: ಸಚಿವ

11:25 PM Sep 15, 2019 | Lakshmi GovindaRaju |

ಬಳ್ಳಾರಿ: “ಸರ್ಕಾರಿ ಆಸ್ಪತ್ರೆಗಳಲ್ಲಿನ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಲು ಶೀಘ್ರವೇ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದ ಸರ್ಕಾರಿ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇವುಗಳನ್ನು ಖುದ್ದು ಅರಿಯುವುದಕ್ಕಾಗಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡಲಾಗುವುದು.

Advertisement

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ಇದಕ್ಕೆ ಚಾಲನೆ ನೀಡಲಾಗುವುದು. ನಂತರ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡಿ ರೋಗಿಗಳಿಂದ, ಜನರಿಂದ ಅಹವಾಲು ಆಲಿಸಲಾಗುವುದು. ಬಳಿಕ 15 ದಿನಗಳೊಳಗೆ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಆಸ್ಪತ್ರೆ ಆಡಳಿತಾ ಧಿಕಾರಿಗಳಿಗೆ ಗಡುವು ನೀಡಲಾಗುವುದು’ ಎಂದರು.

ಕಲಬುರ್ಗಿಯ ಆಸ್ಪತ್ರೆಯೊಂದರ ಡಯಾಲಿಸಿಸ್‌ ಘಟಕದಲ್ಲಿ ಆಗಿರುವ ಸಾವಿನ ಪ್ರಕರಣಕ್ಕೆ ಸಂಬಂ ಧಿಸಿದಂತೆ ಈಗಾಗಲೇ ವರದಿ ಕೇಳಿದ್ದೇನೆ. ಅದರಲ್ಲಿ ಅಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ ಕರ್ತವ್ಯ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆ ಸೇವೆ ನೀಡುವ ವಿಚಾರದಲ್ಲಿ ತಾಂತ್ರಿಕ ತೊಂದರೆ ನೆಪ ಹೇಳಬಾರದು.

ಸೇವೆ ಒದಗಿಸುವಲ್ಲಿ ಏನೇ ಲೋಪ ಇದ್ದರೂ ಅದನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ವೈದ್ಯಾಧಿಕಾರಿಗಳದ್ದೇ ಆಗಿರುತ್ತದೆ ಎಂದು ಎಚ್ಚರಿಸಿದರು. ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಂಪಿ ಉತ್ಸವ; ಸಿಎಂ ಜತೆ ಚರ್ಚೆ: ಪ್ರಸಕ್ತ ಸಾಲಿನ ಹಂಪಿ ಉತ್ಸವ ಆಚರಣೆಗೆ ಸಂಬಂ ಧಿಸಿದಂತೆ ಕೂಡಲೇ ಸಿಎಂ ಯಡಿಯೂರಪ್ಪ ಜತೆ ಚರ್ಚಿಸಲಾಗುವುದು. ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆದು ದಿನಾಂಕ ನಿಗದಿಪಡಿಸಲಾಗುವುದು. ಈ ಮೊದಲು ಹಂಪಿ ಉತ್ಸವವನ್ನು ಪ್ರತಿವರ್ಷ ನ.3, 4, 5ರಂದು ಆಯೋಜಿಸಲಾಗುತ್ತಿತ್ತು.

Advertisement

ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಗುತ್ತಿದ್ದಂತೆ ಹಂಪಿ ಉತ್ಸವ ಆಚರಿಸುವ ದಿನಾಂಕಗಳೂ ಬದಲಾಗಿವೆ. ಆದರೆ ಹಂಪಿಗೆ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುವ ಪ್ರವಾಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಮೈಸೂರು ದಸರಾದಂತೆ ಹಂಪಿ ಉತ್ಸವಕ್ಕೂ ನಿರ್ದಿಷ್ಟ ದಿನಾಂಕ ನಿಗದಿಪಡಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next