Advertisement
ಜಿಲ್ಲಾಡಳಿತ ಈಗಾಗಲೇ ಸರ್ಕಾರದ ಆದೇಶದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮ ವಾಸ್ತವ್ಯ ನಡೆಸಲು ಸಿದ್ಧತೆ ನಡೆಸಿದ್ದು, ಫೆ.20ರಂದು ಜಿಲ್ಲಾಧಿಕಾರಿಗಳು ಹೊಸನೀರಲಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸುವ ಮೂಲಕ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
Related Articles
Advertisement
ಗ್ರಾಮದ ರುದ್ರಭೂಮಿ ಸ್ಥಳದ ಗೊಂದಲ ಪರಿಹರಿಸಿ, ರುದ್ರಭೂಮಿಗೆ ತೆರಳುವ ರಸ್ತೆ ಅಭಿವೃದ್ಧಿ ಪಡಿಸಬೇಕಾಗಿದೆ. ಗ್ರಾಮದಲ್ಲಿ ಅಂಚೆ ಕಚೇರಿ ಇದ್ದರೂಸ್ವಂತ ಕಟ್ಟಡವಿಲ್ಲದೇ ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಪಾಲಕರರು ತಮ್ಮಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ ಪಡುತ್ತಿದ್ದಾರೆ.ಈ ಹಿನ್ನೆಲೆ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನುನೆಲಸಮಗೊಳಿಸಿ ನೂತನ ಕೊಠಡಿ ನಿರ್ಮಿಸಬೇಕು.ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಪದೇ ಪದೇ ಹಾಳಾಗುತ್ತಿದ್ದು, ದುರಸ್ತಿಗೊಳಿಸಿಕುಡಿಯುವ ನೀರಿನ ಸಮಸ್ಯೆ ಎದುರಾಗಂತೆ ಕ್ರಮಕೈಗೊಳ್ಳಬೇಕಾಗಿದೆ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ರಸ್ತೆಯ ಮಧ್ಯದಲ್ಲಿಯೇ ನಿಲ್ಲುತ್ತಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇನ್ನುಳಿದಂತೆ ರಸ್ತೆ, ಬೀದಿದೀಪ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕಾಗಿದೆ.
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಿಂದ ಅನೇಕ ವರ್ಷಗಳಿಂದ ಹೊಸನೀರಲಗಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ. ಗ್ರಾಮದ ಅನೇಕ ಕುಟುಂಬಗಳು ಮನೆ ನಿರ್ಮಿಸಿಕೊಂಡಿದ್ದರೂ ಪಹಣಿ ಪತ್ರ ವಿತರಿಸದ ಹಿನ್ನೆಲೆ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಅಕ್ರಮ-ಸಕ್ರಮದಡಿ ಪಹಣಿ ಪತ್ರ ವಿತರಣೆ ಕ್ರಮ ಕೈಗೊಳ್ಳಬೇಕು. -ಗಂಗಾಧರ ಬಾಣದ, ಗ್ರಾಮಸ್ಥರು
ಗ್ರಾಮದ ಜನರು ರುದ್ರಭೂಮಿ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ. ರುದ್ರಭೂಮಿ ಸ್ಥಳದ ಗೊಂದಲ ಪರಿಹರಿಸಿ, ರುದ್ರಭೂಮಿ ಸ್ಥಳ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. -ಧರೆಪ್ಪಗೌಡ ಪಾಟೀಲ ಗ್ರಾಮಸ್ಥರು
ಹೊಸನೀರಲಗಿ ಗ್ರಾಮದಲ್ಲಿ ಫೆ.20ರಂದು ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಈಸಂದರ್ಭದಲ್ಲಿ ಗ್ರಾಮಸ್ಥರಿಂದ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಅಲ್ಲಿಯೇ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು. ಜಿಲ್ಲೆಯ ಉಳಿದ ತಾಲೂಕಿನಲ್ಲಿಆಯಾ ತಹಶೀಲ್ದಾರರು ಗ್ರಾಮ ವಾಸ್ತವ್ಯ ಕೈಗೊಂಡು ಜನರ ಸಮಸ್ಯೆ ಪರಿಹರಿಸಲಿದ್ದಾರೆ. – ಸಂಜಯ ಶೆಟ್ಟೆಣ್ಣನವರ ಜಿಲ್ಲಾಧಿಕಾರಿಗಳು
ಮನವಿ ಸಲ್ಲಿಸಲು ಸಿದ್ಧತೆ :
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆ ಜಿಲ್ಲಾಡಳಿತವೇ ಗ್ರಾಮಕ್ಕೆ ಭೇಟಿ ನೀಡುತ್ತಿದ್ದು, ಅನೇಕ ವರ್ಷಗಳಿಂದ ಗ್ರಾಮಸ್ಥರು ಎದುರಿಸುತ್ತಿದ ಸಮಸ್ಯೆಗಳಿಗೆ ಪರಿಹಾರ ಸಿಗುವ ವಿಶ್ವಾಸದಲ್ಲಿಗ್ರಾಮಸ್ಥರಿದ್ದಾರೆ. ಈಗಾಗಲೇ ಗ್ರಾಮಸ್ಥರು ತಮ್ಮ ಗ್ರಾಮದ ಸಮಸ್ಯೆಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಟ್ಟಿನಲ್ಲಿ ಜಿಲ್ಲಾ ಧಿಕಾರಿಗಳ ಗ್ರಾಮ ವಾಸ್ತವ್ಯ ಹೊಸನೀರಲಗಿ ಗ್ರಾಮಸ್ಥರಲ್ಲಿ ಹೊಸ ಕನಸುಗಳನ್ನು ಚಿಗುರೊಡಿಸಿದೆ.
-ವೀರೇಶ ಮಡ್ಲೂರ