Advertisement

ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಡಿಕೆಶಿ

10:09 PM May 28, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಶೀಘ್ರ ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಖಾಲಿ ಹುದ್ದೆಗಳಿಗೆ ಅರ್ಹರನ್ನು ಪಾರದರ್ಶಕವಾಗಿ ನೇಮಕ ಮಾಡಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ನಮ್ಮ ಸರಕಾರದ ಆದ್ಯತೆಯಾಗಿದೆ. ಕೆಲವು ಶಾಸಕರು, ಬಿಜೆಪಿ ನಾಯಕರು ವಿದ್ಯುತ್‌ ಬಿಲ್‌ ಹಾಗೂ ಬಸ್‌ ಟಿಕೆಟ್‌ ಹಣ ಪಾವತಿಸಬೇಡಿ ಎಂಬ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಅವರು ಜನರನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮೊದಲು ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಲಿ. 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಸೇರಿ ಬಿಜೆಪಿಯು ಅನೇಕ ಭರವಸೆಗಳನ್ನು ಪ್ರಣಾಳಿಕೆ ನೀಡಿತ್ತು. ಆದರೆ ಮಾಡಲಿಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌ ಪಕ್ಷದ ನಾವು ಬಸವಣ್ಣ ಹಾಗೂ ಕುವೆಂಪು ಅವರ ನಾಡಿನವರು. ಪಕ್ಷ ಕೊಟ್ಟ ಮಾತಿಗೆ ಬದ್ಧವಾಗಿದ್ದು, ನುಡಿದಂತೆ ನಡೆಯುತ್ತೇವೆ. ನಮ್ಮ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ನೆಟ್ಟಾರು ಅವರ ಪತ್ನಿ ಉದ್ಯೋಗ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದಾರೆ. ಬಿಜೆಪಿಯವರು ಆತುರದಿಂದ ರಾಜಕೀಯ ಮಾಡಲು ಬಯಸಿದರೆ ನಾವು ಸಮಾಜದ ಶಾಂತಿ, ಸೌಹಾರ್ದ ಹಾಗೂ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next