Advertisement
ವಾಹಿನಿ ವಿರುದ್ಧ ಪತ್ರ ಬರೆದು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಪುಷ್ಕರ, ನಾವು ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗೋದು’ ಎಂಬ ಅಡಿ ಬರಹದೊಂದಿಗೆ ದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ.
Related Articles
Advertisement
‘ಗೋಧಿಬಣ್ಣ ಸಾಧಾರಣ ಮೈಕಟ್ಟು ಚಿತ್ರದಿಂದ ಅವನೇ ಶ್ರೀಮನ್ನಾರಾಯಣ ಸಿನಿಮಾದವರೆಗೆ ನಾನು ಮತ್ತು ರಕ್ಷಿತ್ ಜೊತೆಯಾಗಿ ಸಾಗಿ ಬಂದಿದ್ದೇವೆ. ನನ್ನ ಸಿನಿಮಾ ಜರ್ನಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಅವನೇ ಶ್ರೀಮನ್ನಾರಾಯಣ ಬ್ಯುಸಿನೆಸ್ ಬಗ್ಗೆ ಅನೇಕ ಊಹಾಪೋಹಗಳಿವೆ. ಅದು ನನ್ನ ವೈಯಕ್ತಿಕ. ಲಾಭ-ನಷ್ಟ ಏನೇ ಇದ್ದರೂ ಉತ್ಸಾಹದಲ್ಲಿ ನಾವು ಒಂದು ತಂಡದ ರೀತಿ ಕೆಲಸ ಮಾಡಿದ್ದೇವೆ. ಮಂದೆಯೂ ಹಾಗೆಯೇ ಮಾಡಲಿದ್ದೇವೆ. ಒಂದು ಸಿನಿಮಾದ ಫಲಿತಾಂಶದಿಂದ ನಮಗೆ ಸಿನಿಮಾದ ಮೇಲಿರುವ ಒಲವು ಕಡಿಮೆ ಆಗುವುದಿಲ್ಲ. ಒಂದು ಕುಟುಂಬದ ರೀತಿ ನಮ್ಮ ನಡುವೆ ಏನೇ ಹೊಂದಾಣಿಕೆ ಇರಬಹುದು. ಅದನ್ನು ಸಾರ್ವಜನಿಕವಾಗಿ ನಾವು ಸ್ಪಷ್ಟಪಡಿಸಬೇಕಿಲ್ಲ’.
‘ರಕ್ಷಿತ್ ಅವರಂತಹ ವ್ಯಕ್ತಿ ಬಗ್ಗೆ ಯಾವುದೇ ಸುದ್ದಿ ಸಂಸ್ಥೆ ಈ ರೀತಿಯ ವರದಿ ಪ್ರಸಾರ ಮಾಡಿದರೆ ನಾನು ವಿರೋಧಿಸುತ್ತೇನೆ. ಎಲ್ಲ ಮಾಧ್ಯಮಕ್ಕೂ ಸಾಕಷ್ಟು ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿ ಇದೆ. ನಾವು ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗುತ್ತದೆ. ಮತ್ತೆ ಭವಿಷ್ಯದಲ್ಲಿ ಈ ರೀತಿ ಮಾಡಬಾರದು ಎಂದು ವಿನಂತಿಸಿಕೊಳ್ಳುತ್ತೇನೆಂದು’ ಪುಷ್ಕರ್ ಹೇಳಿಕೊಂಡಿದ್ದಾರೆ.