Advertisement

ವಿಜ್ಞಾನ ಲೇಖಕ ಪ್ರೊ.ಲಕ್ಷ್ಮಣರಾವ್‌ ನಿಧನ

07:05 AM Dec 30, 2017 | |

ಮೈಸೂರು: ವಿಜ್ಞಾನ ಲೇಖಕ ಪ್ರೊ.ಜೆ.ಆರ್‌.ಲಕ್ಷ್ಮಣರಾವ್‌ (97) ನಿಧನರಾಗಿದ್ದಾರೆ. ಮೈಸೂರಿನ ಯುವರಾಜ ಕಾಲೇಜಿನಲ್ಲಿ ವಿಜ್ಞಾನ  ಪ್ರಾಧ್ಯಾಪಕರಾಗಿದ್ದ ಲಕ್ಷ್ಮಣರಾವ್‌, ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಬೆಳಗ್ಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಮೂವರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

Advertisement

ವಿಜ್ಞಾನ ವಿಷಯಗಳ ಬಗ್ಗೆ ಅವರು 30ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದರು. 2016ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿತ್ತು.

1921 ಜನವರಿ 21 ರಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಲಕ್ಷಣರಾವ್‌ ಜನಿಸಿದ್ದರು. ಅವರ ತಂದೆ ರಾಘವೇಂದ್ರರಾವ್‌, ತಾಯಿ ನಾಗಮ್ಮ. ಪ್ರಾರಂಭಿಕ ವಿದ್ಯಾಭ್ಯಾಸ ಹುಟ್ಟೂರಿನಲ್ಲಿ ಪೂರೈಸಿದರು. ದಾವಣಗೆರೆಯಲ್ಲಿ ಪ್ರೌಢಶಾಲೆ ಕಲಿತ ಅವರು ಮೈಸೂರಿನ ಇಂಟರ್‌ ಮೀಡಿಯೆಟ್‌ ಕಾಲೇಲ್‌ನಿಂದ (ಇಂದಿನ ಯುವರಾಜ ಕಾಲೇಜ…) ಇಂಟರ್‌ ಮೀಡಿಯೆಟ್‌ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಎಂಎಸ್ಸಿ ಪದವಿ ಪಡೆದಿದ್ದರು.

ತುಮಕೂರಿನ ಇಂಟರ್‌ ಮೀಡಿಯೆಟ್‌ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ ಅವರು ಬೆಂಗಳೂರಿನ ಸೆಂಟ್ರಲ್‌ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ,ಪ್ರಾಧ್ಯಾಪಕರಾಗಿ ಮತ್ತು ವಿಶ್ವವಿದ್ಯಾಲಯದ ಪ್ರಸಾರಾಂಗದಿಂದ ಹೊರತಂದ ಇಂಗ್ಲಿಷ್‌ ಕನ್ನಡ ನಿಘಂಟಿನ ಪ್ರಧಾನ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ವಿಜ್ಞಾನದ ಬೋಧನೆಯ ಜತೆಗೆ ವೈಜ್ಞಾನಿಕ ಲೇಖನಗಳನ್ನು ಬರೆಯುವುದನ್ನುಆರಂಭಿಸಿದ ಅವರು ಬರೆದ ಮೊದಲ ಪುಸ್ತಕ ಆಹಾರ (1944). ಪರಮಾಣು ಚರಿತ್ರೆ, ಗೆಲಿಲಿಯೋ, ವಿಜ್ಞಾನವಿಚಾರ, ಲೂಯಿಪಾಸ್ತರ್‌, ವಿಜ್ಞಾನಿಗಳೊಡನೆ ರಸನಿಮಿಷಗಳು ಅವರ ಪ್ರಮುಖ ಕೃತಿಗಳು.

Advertisement
Advertisement

Udayavani is now on Telegram. Click here to join our channel and stay updated with the latest news.

Next