Advertisement

PhD ವಿದ್ಯಾರ್ಥಿನಿಗೆ ಪ್ರೊಫೆಸರ್‌ ಲೈಂಗಿಕ ಕಿರುಕುಳ ಗಂಭೀರ ಪರಿಗಣನೆ: ತುಳಸಿಮಾಲಾ

11:01 PM Mar 10, 2024 | Team Udayavani |

ವಿಜಯಪುರ: ವಿಶ್ವವಿದ್ಯಾನಿಲಯದ ಸಂಶೋಧನ ವಿದ್ಯಾರ್ಥಿನಿಯರಿಗೆ ಪ್ರೊಫೆಸರ್‌ ಓರ್ವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಪ್ರೊ| ತುಳಸಿಮಾಲಾ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ವಿಶ್ವವಿದ್ಯಾನಿಲಯದಲ್ಲಿ ಇಂಥ ಕೃತ್ಯ ನಡೆದಿರುವುದು ಬೇಸರ ತರಿಸಿದೆ. ಸಂತ್ರಸ್ತೆಗೆ ಆತ್ಮಸ್ಥೈರ್ಯ ತುಂಬಲು ಆಪ್ತ ಸಮಾಲೋಚನೆ ಮಾಡಿದ್ದೇವೆ. ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ವಿದ್ಯಾರ್ಥಿನಿ ನೀಡಿರುವ ದೂರನ್ನು ಯುಜಿಸಿ ನಿಯಮಾನುಸಾರ ಆಂತರಿಕ ಪರಿಶೀಲನೆ ಸಮಿತಿಗೆ ವರ್ಗಾಯಿಸಿದ್ದೇವೆ. ಸದರಿ ಸಮಿತಿ ಈಗಾಗಲೇ ಎರಡು ಬಾರಿ ವಿಚಾರಣೆ ನಡೆಸಿದ್ದು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಬಳಿಕ ವಿಚಾರಣೆ ಪೂರ್ಣಗೊಳಿಸಿ ವರದಿ ನೀಡಲಿದೆ. ಪ್ರಕರಣದಲ್ಲಿ ವಿಶ್ವವಿದ್ಯಾನಿಲಯವು ಆರೋಪಿಯನ್ನು ರಕ್ಷಿಸುತ್ತಿದೆ ಹಾಗೂ ಸಂತ್ರಸ್ತೆಗೆ ಬೆಂಬಲ ನೀಡುತ್ತಿಲ್ಲ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅಂತರಿಕ ಸಮಿತಿ ತನಿಖೆ ನಡೆಸಿ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next