Advertisement
ಹಿರಿಯ ಸಚಿವರು ಹಾಗೂ ಸಂಪುಟದಿಂದ ಕೈಬಿಡಬೇಕು ಎಂದುಕೊಂಡಿರುವ ಸಚಿವರ ವರ್ಚಸ್ಸು, ಜಾತಿ – ಸಮುದಾ ಯದ ಮೇಲಿನ ಹಿಡಿತ, ಜಿಲ್ಲೆ, ಕ್ಷೇತ್ರ, ಸಮುದಾಯದ ಹೊರತಾಗಿ ಇರುವ ವರ್ಚಸ್ಸು ಮತ್ತು ನಾಯಕತ್ವಕ್ಕೆ ಬೆಂಬಲ ಮುಂತಾದ ವಿಷಯಗಳ ಬಗ್ಗೆ ವರಿಷ್ಠರು ವರದಿ ಪಡೆದು ಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ವಾಸ್ತವ ಸ್ಥಿತಿ ಅರಿಯಲು ಬಿಜೆಪಿ ಆಂತರಿಕ ಸಮೀಕ್ಷೆ ನಡೆಸಿದೆ ಎನ್ನಲಾಗಿದ್ದು, ಪಕ್ಷವು ಸ್ಪಷ್ಟ ಬಹುಮತದಿಂದ ಬಹಳ ದೂರದಲ್ಲಿದೆ ಎನ್ನುವ ಅಂಶ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆ ವರದಿ ಹಿನ್ನೆಲೆಯಲ್ಲಿ ವರಿಷ್ಠರು ಕರ್ನಾಟಕದ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಳ್ಳುವಂತಾಗಿದೆ.
Related Articles
Advertisement
ಆ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಮೇಲ್ವಿಚಾರಣೆಯಲ್ಲೇ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಉತ್ತರ ಭಾರತದಲ್ಲಿ ಅಧಿಕಾರದಲ್ಲಿ ಇದ್ದ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಉಳಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯು ಕರ್ನಾಟಕದಲ್ಲಿ ಮಾತ್ರ ವಿಫಲವಾಗುತ್ತಿದೆ. ಈ ಬಾರಿ ಹೇಗಾದರೂ ರಾಜ್ಯದಲ್ಲಿ ಪುನರಾಯ್ಕೆ ಯಾಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ರಾಜ್ಯದ ಎಲ್ಲ ಕಾರ್ಯತಂತ್ರಗಳನ್ನು ಈಗಿನಿಂದಲೇ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸೂಕ್ಷ್ಮ ಹೆಜ್ಜೆವರಿಷ್ಠರು ಕರ್ನಾಟಕದಲ್ಲಿ ಯಾವ ರೀತಿಯ ಹೆಜ್ಜೆ ಇಡಬೇಕು ಎನ್ನುವ ನಿಟ್ಟಿನಲ್ಲಿ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಚುನಾವಣ ವರ್ಷವಾಗಿರುವುದರಿಂದ ಸಚಿವರ ಬದಲಾವಣೆಯಿಂದ ಸಂಬಂಧಪಟ್ಟವರ ಸಮುದಾಯಗಳು ಪಕ್ಷದ ವಿರುದ್ಧ ತಿರುಗಿ ಬಿದ್ದರೆ, ಅದಕ್ಕೆ ಯಾವ ರೀತಿಯ ಪರ್ಯಾಯ ಮಾರ್ಗ ಅನುಸರಿಸಬೇಕು ಎನ್ನುವ ಕುರಿತಂತೆ ಎಲ್ಲ ಆಯಾಮಗಳಲ್ಲಿಯೂ ಆಲೋಚನೆ ನಡೆಸಲಾಗುತ್ತಿದೆ ಎಂದೂ ಹೇಳಲಾಗಿದೆ. ವರಿಷ್ಠರ ಚರ್ಚೆ?
ಪಕ್ಷ ಮತ್ತು ಸರಕಾರದಲ್ಲಿ ಭಾರೀ ಬದಲಾವಣೆ ಮಾಡುವ ನಿಟ್ಟಿನಲ್ಲಿ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳಬೇಕೆಂಬ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಹಿನ್ನೆಲೆಯಲ್ಲಿಯೇ ಈ ಮಾಸಾಂತ್ಯಕ್ಕೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾ
ವಣೆಗಳು ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. - ಶಂಕರ ಪಾಗೋಜಿ