Advertisement

ಸರಕಾರದ ಅನುಮತಿ ಪಡೆದು ‘ಪ್ರತಿಜ್ಞಾ’ಕಾರ್ಯಕ್ರಮ: ಡಿಕೆಶಿ

09:14 PM Jun 01, 2020 | Sriram |

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಜೂನ್‌ 7 ರಂದು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯಕ್ರಮ ಆಯೊಜನೆಗೆ ಅವಕಾಶ ನೀಡದಿರುವುದರಿಂದ ಮತ್ತೆ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

Advertisement

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರದ ನೂತನ ಮಾರ್ಗಸೂಚಿಯಲ್ಲಿ ಜೂನ್‌ 8ರ ವರೆಗೂ ಯಾವುದೇ ರಾಜಕೀಯ ಸಭೆ ನಡೆಸುವಂತಿಲ್ಲ ಎಂದು ಹೇಳಿದೆ. ಹೀಗಾಗಿ ಸರಕಾರ ಅನುಮತಿ ನೀಡಿದ ಅನಂತರ ಪದಗ್ರಹಣ ‘ಪ್ರತಿಜ್ಞಾ’ ಕಾರ್ಯಕ್ರಮ ನಡೆಸಲಾಗುವುದು ಎಂದು ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜವಾಬ್ದಾರಿ ನೀಡಿದ ಘಳಿಗೆಯಿಂದಲೇ ನನ್ನ ಕೆಲಸ ಆರಂಭಿಸಿದ್ದೇನೆ. ಅನಂತರ ಕೋವಿಡ್-19 ಸೋಂಕು ಎದುರಾಗಿದ್ದು, ಎಲ್ಲ ಹಿರಿಯ ನಾಯಕರ ಸಹಕಾರದೊಂದಿಗೆ ಪಕ್ಷದ ಕಾರ್ಯಕರ್ತರಿಗೆ ಅಗತ್ಯ ಮಾರ್ಗದರ್ಶನ ನೀಡಿ ನನ್ನ ಕೆಲಸ ಮುಂದುವರೆಸಿದ್ದೇನೆ ಎಂದ ಅವರು ಕೋವಿಡ್‌ ಸಮಯದಲ್ಲಿ ನಮ್ಮ ಹೋರಾಟ ನಡೆಯುತ್ತಿದ್ದು, ಮಾನವ ಸೇವೆಗಾಗಿ, ಮಾನವೀಯತೆಯಿಂದ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದರು.

ಸರಕಾರ ವಿಫ‌ಲವಾದಾಗ ಪ್ರತಿಪಕ್ಷವಾಗಿ ಎಲ್ಲ ವರ್ಗದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡ ಅನಂತರ ಬೆಂಗಳೂರಿನಲ್ಲಿ ಸಾಂಕೇತಿಕವಾಗಿ 150 ಮಂದಿ ಸೇರಿ ಕಾರ್ಯಕ್ರಮ ಮಾಡುತ್ತೇವೆ. ಉಳಿದಂತೆ ಎಲ್ಲ ಪಂಚಾಯತ್‌ಗಳಲ್ಲಿ, ವಾರ್ಡ್‌ಗಳಲ್ಲಿ ಸೇರಿ ಸುಮಾರು 7,800 ಕಡೆಗಳಲ್ಲಿ ಏಕಕಾಲದಲ್ಲಿ ಸಂವಿಧಾನದ ಪೀಠಿಕೆ ವಾಚನದೊಂದಿಗೆ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next