Advertisement
ನಗರದ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಮಠ ಐತಿಹಾಸಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ನಾಯಕರಾದ ಯಡಿಯೂರಪ್ಪನವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದು ಬಣ್ಣಿಸಿದರು.
Related Articles
Advertisement
ಸಮುದಾಯದ ಒತ್ತಾಯದಂತೆ 2ಎ ವರ್ಗಕ್ಕೆ ಸೇರಿಸಲು ಸರ್ವ ಪ್ರಯತ್ನ ನಡೆಸಿದರೂ ಕೆಲವು ತಾಂತ್ರಿಕ ಕಾರಣದಿಂದ ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಮೂರು ದಶಕಗಳಿಂದಲೂ ಹೋರಾಟ ನಡೆಯುತ್ತಿದೆ. ಡಾ.ಹನುಮನಾಳ ಅವರಿಂದ ಆರಂಭವಾದ ಈ ಹೋರಾಟ ಇದೀಗ ಪರಮಪೂಜ್ಯ ಜಯಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ ವಚನಾನಂದ ಮಹಾಸ್ವಾಮಿಗಳು ಮುಂದುವೆರೆಸುತ್ತಿದ್ದು, ಅವರು ಸುಮಾರು 700 ಕಿ.ಮೀ ಪಾದಯಾತ್ರೆ ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿ ಉಂಟು ಮಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಬಂದರೆ ಉತ್ತಮ: ಸಚಿವ ಸುಧಾಕರ್
ಮುಂದಿನ ಪೀಳಿಗೆಯ ನಮ್ಮ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅನುಕೂಲವಾಗಬೇಕೆಂಬ ಒಂದೇ ಕಾರಣಕ್ಕಾಗಿ ಈ ಬೃಹತ್ ಹೋರಾಟ ಆರಂಭವಾಗಿದೆಯೇ ಹೊರತು ನಾವೇನು ರಾಜಕೀಯ ಮೀಸಲಾತಿ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಅತಿದೊಡ್ಡ ಸಮುದಾಯವಾದ ಲಿಂಗಾಯತ ಪಂಚಮಸಾಲಿ ಸಮುದಾಯವು ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ಆದ ಕೊಡುಗೆ ನೀಡಿದೆ. ವೀರರಾಣಿ ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ ಸೇರಿದಂತೆ ಅನೇಕರು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.
ನಮ್ಮ ಸಮುದಾಯವು ಮೂಲತಃ ರೈತಾಪಿ ವರ್ಗಕ್ಕೆ ಸೇರಿದೆ. ಕೆಲವರು ಸರ್ಕಾರಿ, ಅರೆಸರ್ಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆರಳಣಿಕೆಯಷ್ಟು ಜನರು ಉದ್ಯಮಿದಾರರಾಗಿದ್ದು, 2ಎಗೆ ಸೇರ್ಪಡೆ ಮಾಡಬೇಕೆಂದು ನಡೆಸುತ್ತಿರುವ ಹೋರಾಟ ಕಾನೂನು ಬದ್ದವಾಗಿದೆ ಎಂದರು.
ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ ಸಚಿವರು, ಶಾಸಕರು, ಇಡೀ ಸಮುದಾಯ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಸಮುದಾಯದ ಬೇಡಿಕೆ ಈಡೇರಿಸಲು ತಾವು ಎಲ್ಲ ರೀತಿಯ ಹೋರಾಟ ಮಾಡುತ್ತೇವೆ ಎಂದು ನಿರಾಣಿ ಶಪಥ ಮಾಡಿದರು.