ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಬಂಟರ ಭವನದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಾ. 10ರಂದು ಸಂಜೆ ವಾರ್ಷಿಕ ಜಾತ್ರಾ ಮ ಹೋತ್ಸವದ ಸಂದರ್ಭದಲ್ಲಿ ಜರಗಿದ ರಂಗಪೂಜೆ, ದರ್ಶನ ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ, ಶ್ರೀ ದುರ್ಗಾಪರಮೇಶ್ವರಿ ಹಾಗೂ ಶ್ರೀ ನಾಗದೇವರ ಕೃಪೆಗೆ ಪಾತ್ರರಾದರು.
ಮಾ. 10ರಂದು ಬೆಳಗ್ಗೆ 9ರಿಂದ ಗಣಹೋಮ, ದುರ್ಗಾಹೋಮ, ಪಂಚ ವಿಂಶತಿ ಕಲಶಾಭಿಷೇಕ, ಆಶ್ಲೇಷಾ ಬಲಿ, ಪ್ರಸನ್ನ ಪೂಜೆ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ, ಅಪರಾಹ್ನ 4ರಿಂದ ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮ, ಸಂಜೆ 6ರಿಂದ ರಂಗಪೂಜೆ, ದರ್ಶನ, ಬಲಿ ಉತ್ಸವ, ಪ್ರಸಾದ ವಿತರಣೆ ಜರಗಿತು.
ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಸಂಘದ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಹರೀಶ್ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್ ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಉಪ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಕುರ್ಲಾ, ಜ್ಞಾನ ಮಂದಿರದ ಸಮಿತಿಯ ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಮಾಜಿ ಕಾರ್ಯಾಧ್ಯಕ್ಷರಾದ ಬೊಳ್ನಾಡುಗುತ್ತು ಚಂದ್ರಹಾಸ್ ರೈ, ಜಗನ್ನಾಥ ಎನ್. ರೈ, ಸಂಘದ ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳನ್ನು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ್ ತಂತ್ರಿ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ ಬನ್ನಿಂತಾಯ ಅವರು ನೆರವೇರಿಸಿದರು. ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳು, ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಕಲ್ಪನಾ ಶೆಟ್ಟಿ ದಂಪತಿ ಪೂಜೆಯಲ್ಲಿ ಸಹಕರಿಸಿದರು. ಧಾರ್ಮಿಕ ಕಾರ್ಯಕ್ರಮವಾಗಿ ಮಾ. 9ರಂದು ಸಂಜೆ ದೇವತಾ ಪ್ರಾರ್ಥನೆ, ತೋರಣಮುಹೂರ್ತ, ಪುಣ್ಯಾಹ ವಾಚನ, ವಾಸ್ತುಪೂಜೆ, ರಾತ್ರಿಪೂಜೆ ನೆರವೇರಿತು.
ಮಾ. 11ರಂದು ಬೆಳಗ್ಗೆ 8ರಿಂದ ಸಂಪ್ರೋಕ್ಷಣೆ, ಮಂತ್ರಾಕ್ಷತೆ ಆಯೋಜಿಸಲಾಗಿತ್ತು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಧಾರ್ಮಿಕ ಉತ್ಸವ ನಡೆದವು. ಭಕ್ತರು, ಸಮಾಜ ಬಾಂಧವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು.