ಮುಂಬಯಿ: ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ಕೋವಿಡ್ ಲಸಿಕೆ ಶಿಬಿರವು ಎ. 15, 16ರಂದು ಅಪೋಲೊ ಆಸ್ಪತ್ರೆಯಲ್ಲಿ ನಡೆಯಿತು.ಈ ಸಂದರ್ಭ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಮಾತನಾಡಿ, ಬಂಟ ಬಾಂಧವರ ಯೋಗ ಕ್ಷೇಮವೇ ನಮ್ಮ ಮುಖ್ಯ ಧ್ಯೇಯ ಎಂಬ ವಿಚಾರದ ಅಡಿಯಲ್ಲಿ ಆದಷ್ಟು ಮಂದಿಯನ್ನು ಕೋವಿಡ್ ಲಸಿಕೆ ಪಡೆಯುವಂತೆ ಪ್ರೇರೇಪಿಸುತ್ತಿದ್ದೇವೆ. ಕೋವಿಡ್‌ನಿಂದಾಗುವ ತೊಂದರೆಗಳ ಕುರಿತು ಜಾಗೃತಿ ಮೂಡಿಸಿ, ಅವರ ಹಾಗೂ ಅವರ ಪರಿವಾರದ ಸದಸ್ಯರ ಜೀವನವನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಈ ಶಿಬಿರ ಆಯೋಜಿಸಲಾಗಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಬಂಟರ ಸಂಘ ಮುಂಬಯಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ವೈದ್ಯಕೀಯ ವಿಭಾಗದ ಕಾರ್ಯಾಧ್ಯಕ್ಷ ಬಾಲೇಶ್ ಅರಿಗ ಅವರ ಮುಂದಾಳತ್ವದಲ್ಲಿ ಜರಗಿದ ಶಿಬಿರದಲ್ಲಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಸಮನ್ವಯಕ ಜಗದೀಶ್ ಶೆಟ್ಟಿ ನಂದಿಕೂರು, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ಖಾಂದೇಶ್, ಉಪ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ, ದಕ್ಷಿಣ್, ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ರವೀಶ್ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೈಕಾಡಿ ಹೆದ್ದಾರಿ ಮನೆ, ಜತೆ ಕೋಶಾಧಿಕಾರಿ ಭಾಸ್ಕರ್ ಶೆಟ್ಟಿ ಪದ್ಮ ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ವಿಭಾಗದ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ಸಮಿತಿಯ ಉಪ ಕಾರ್ಯಾಧ್ಯಕ್ಷೆ ಮಮತಾ ಆರ್. ಶೆಟ್ಟಿ, ಕೋಶಾಧಿಕಾರಿ ಗೀತಾ ಎಸ್. ಶೆಟ್ಟಿ, ಸದಸ್ಯೆಯರಾದ ಜ್ಯೋತಿ ಎಸ್. ಶೆಟ್ಟಿ, ತಾರಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್. ಶೆಟ್ಟಿ, ಯುವ ವಿಭಾಗದ ಸಮನ್ವಯಕರಾದ ಯಾಶಿಕಾ ಡಿ. ಶೆಟ್ಟಿ, ಮಾನಸ್ ಶೆಟ್ಟಿ, ಮನೀಶ್ ಶೆಟ್ಟಿ, ಹರೀಶ್ ಎ. ಶೆಟ್ಟಿ ಪಾಲ್ಗೊಂಡಿದ್ದರು.
ವಿವಿಧ ವಲಯಗಳ ಪ್ರತಿನಿಧಿಗಳಾದ ಸತೀಶ್ ಶೆಟ್ಟಿ ಮೂಡುಕೊಟ್ರಪಾಡಿ, ರಾಜೇಶ್ವರಿ ಎಸ್. ಶೆಟ್ಟಿ, ಸುರೇಶ್ ಶೆಟ್ಟಿ ಸೀತಾನದಿ, ಬಾಲಕೃಷ್ಣ ಶೆಟ್ಟಿ ಸಿಬಿಡಿ, ಚೇತನ್ ಶೆಟ್ಟಿ, ಗುರು ಶೆಟ್ಟಿ ಪನ್ವೇಲ್, ಅಶೋಕ್ ಶೆಟ್ಟಿ ಉರಾಣ್, ವೈದ್ಯಕೀಯ ಸಮಿತಿಯ ಉಪಕಾರ್ಯಾಧ್ಯಕ್ಷ ಕೊಲ್ಪೆ ಧನಂಜಯ ಶೆಟ್ಟಿ ಮೊದಲಾದವರು ಸಹಕರಿಸಿದರು.ಕಾರ್ಯಕ್ರಮದಲ್ಲಿ ಸುಮಾರು 192 ಮಂದಿ ಬಂಟ ಬಾಂಧವರು ಕೋವಿಡ್ ಲಸಿಕೆ ಹಾಕಿಸಿಕೊಂಡರು.
ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಕೆ. ಡಿ. ಶೆಟ್ಟಿ, ಸಂತೋಷ್ ಡಿ. ಶೆಟ್ಟಿ, ಸಂಜೀವ ಎನ್. ಶೆಟ್ಟಿ, ಭಾಸ್ಕರ್ ಶೆಟ್ಟಿ ತಾಳಿಪಾಡಿಗುತ್ತು, ಸಲಹೆಗಾರರಾದ ಶಿವರಾಮ್ ಜಿ. ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ದಯಾನಂದ ಶೆಟ್ಟಿ ಶಿಮಂತೂರು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದರೇಣುಕಾ ರೈ, ವೀಣಾ ಎ. ಶೆಟ್ಟಿ, ಗುಣವತಿ ವೈ. ಶೆಟ್ಟಿ ಮೊದಲಾದವರುಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರನ್ನು ಅಭಿನಂದಿಸಿ ಗೌರವಿಸಿದರು.